ETV Bharat / state

ದ್ವಿತೀಯ ಪಿಯುಸಿ ಫಲಿತಾಂಶ : ಹಾಸನಕ್ಕೆ 11ನೇ ಸ್ಥಾನ - ಹಾಸನ 11ನೇ ಸ್ಥಾನ

ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ರಾಜ್ಯಕ್ಕೆ ಹಾಸನ 11ನೇ ಸ್ಥಾನ ಪಡೆದಿದೆ.

Result of secondary PUC test
ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ
author img

By

Published : Jul 15, 2020, 12:43 AM IST

ಹಾಸನ: ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು, ರಾಜ್ಯಕ್ಕೆ ಹಾಸನ 11ನೇ ಸ್ಥಾನ ಪಡೆದಿದೆ. ಕಳೆದ ಬಾರಿಗಿಂತ ಈ ಬಾರಿ ಶೇ. 5ರಷ್ಟು ಫಲಿತಾಂಶ ಕಡಿಮೆಯಾಗಿದ್ದು ನಿರಾಸೆ ಮೂಡಿಸಿದೆ.

ಜಿಲ್ಲೆಯಲ್ಲಿ ಒಟ್ಟು 14,766 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 10,363 ವಿದ್ಯಾರ್ಥಿಗಳು ತೇರ್ಗಡೆಗೊಳ್ಳುವ ಮೂಲಕ ಹಾಸನ ಜಿಲ್ಲೆಗೆ ಶೇ. 70.18 ಅಂಕ ಲಭಿಸಿದೆ.

ಇನ್ನು ಈ ಬಾರಿಯೂ ಕೂಡ ವಿಜ್ಞಾನ ವಿಭಾಗದಲ್ಲಿ 4,762 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 4,137 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ವಿಜ್ಞಾನ ವಿಭಾಗವು ಶೇ. 86.88ರಷ್ಟು ಅಂಕ ಪಡೆಯುವ ಮೂಲಕ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದೆ.

ಇನ್ನು ವಾಣಿಜ್ಯ ವಿಭಾಗದಲ್ಲಿ 6,007 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 4,340 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಶೇಕಡ 72.25ರಷ್ಟು ಅಂಕ ಪಡೆಯುವ ಮೂಲಕ ಜಿಲ್ಲೆಗೆ ದ್ವಿತೀಯ ಸ್ಥಾನ ಬಂದಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ

ಜಿಲ್ಲೆಯಲ್ಲಿ ಕಲಾವಿಭಾಗದಲ್ಲಿ 3,997 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 1,886 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇಕಡಾ 47.19ರಷ್ಟು ಫಲಿತಾಂಶ ದಾಖಲಾಗಿದೆ.

ಇನ್ನು ಗ್ರಾಮೀಣ ಪ್ರದೇಶದಲ್ಲಿ 3,715 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲ್ಲಿ 2,432 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಹಾಗೆಯೇ ನಗರ ಪ್ರದೇಶದಲ್ಲಿ ಪರೀಕ್ಷೆ ಬರೆದ ಸುಮಾರು 11,051 ವಿದ್ಯಾರ್ಥಿಗಳ ಪೈಕಿ 7,931 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಈ ಬಾರಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ಹಿಂದಿಕ್ಕಿದ್ದಾರೆ.

ಇನ್ನು ಈ ಬಾರಿ ಬಾಲಕರು ಶೇಕಡ 59.07ರಷ್ಟು ಫಲಿತಾಂಶ ತಂದುಕೊಟ್ಟರೆ, ಶೇಕಡಾ 69.53ರಷ್ಟು ಫಲಿತಾಂಶ ಕೊಡುವ ಮೂಲಕ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಇದರ ಜೊತೆಗೆ ಕನ್ನಡ ಮಾಧ್ಯಮದಲ್ಲಿ 51.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾದರೆ, ಆಂಗ್ಲ ಮಾಧ್ಯಮದಲ್ಲಿ 79.02ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಈ ಬಾರಿ ಹಾಸನ ಜಿಲ್ಲೆ 11ನೇ ಸ್ಥಾನಕ್ಕೆ ಇಳಿಯಲ್ಪಟ್ಟಿದೆ.

ಒಟ್ಟಾರೆ, ಈ ಬಾರಿಯ ಫಲಿತಾಂಶ ಜಿಲ್ಲೆಗೆ ನಿರಾಸೆಯನ್ನುಂಟು ಮಾಡಿತ್ತು. ಕೆಲವರು ಕೊರೊನಾ ಭಯದಿಂದ ಪರೀಕ್ಷೆಗೆ ಹಾಜರಾಗದೆ ಇದ್ದ ಕಾರಣವೂ ಫಲಿತಾಂಶದಲ್ಲಿ ಕಡಿಮೆಯಾಗಲು ಮತ್ತೊಂದು ಕಾರಣ ಎನ್ನಬಹುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.