ಹಾಸನ : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಅಣ್ಣೇನಳ್ಳಿ-ಜೋಡಿಗಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಓರ್ವ ಪತ್ರಕರ್ತನಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಮಂಗಳೂರು: ವೈದ್ಯೆಯೊಂದಿಗೆ ಅಸಭ್ಯ ವರ್ತನೆ ತೋರಿದ ಬಸ್ ಕ್ಲೀನರ್ ಬಂಧನ