ETV Bharat / state

ಕಾಡಾನೆ ದಾಳಿಗೆ ಮಹಿಳೆ ಬಲಿ... ಪ್ರತಿಭಟನಾಕಾರರ ಬಂಧನ... ಶಾಸಕ ಸಿಮೆಂಟ್ ಮಂಜು ಖಂಡನೆ - etv bharat kannda

ಕಾಡಾನೆ ತುಳಿತದಿಂದ ಮಹಿಳೆ ಸಾವನ್ನಪ್ಪಿದ ಘಟನೆ ಸಂಬಂಧ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

sakaleshpur-mla-cement-manju-arrest-of-11-protesters-for-death-of-a-woman-due-to-elephant-attack
11 ಮಂದಿ ಪ್ರತಿಭಟನಾಕಾರರ ಬಂಧನ: ಶಾಸಕ ಸಿಮೆಂಟ್ ಮಂಜು ಖಂಡನೆ
author img

By

Published : Aug 19, 2023, 5:05 PM IST

Updated : Aug 19, 2023, 6:21 PM IST

ಶಾಸಕ ಸಿಮೆಂಟ್ ಮಂಜು

ಹಾಸನ: ಕಾಡಾನೆ ತುಳಿತದಿಂದ ಮಹಿಳೆ ಸಾವನ್ನಪ್ಪಿದ ಘಟನೆ ಸಂಬಂಧ ಪ್ರತಿಭಟನೆ ಕೈಗೊಂಡಿದ್ದ 11 ಮಂದಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಡೂರು ಗ್ರಾಮದಲ್ಲಿ ಕವಿತಾ ಎಂಬ ಮಹಿಳೆ ಮೇಲೆ ಆನೆ ದಾಳಿ ಮಾಡಿ ಬಲಿ ಪಡೆದಿತ್ತು. ಇನ್ನು ಈ ಸಂಬಂಧ ಕಿಲ ಮಲೆನಾಡು ಭಾಗದ ಸ್ಥಳೀಯರು ಹಾಗೂ ಹೋರಾಟಗಾರರು ಸರ್ಕಾರಿ ಆಸ್ಪತ್ರೆಯ ಮುಂದೆ ಜಮಾಯಿಸಿ ಪ್ರತಿಭಟನೆ ಮಾಡಲು ಮುಂದಾಗಿದ್ದರು. ಈ ವೇಳೆ ಅಧಿಕಾರಿಗಳು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಇನ್ನು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ಪೊಲೀಸರು ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ನಿನ್ನೆ(ಶುಕ್ರವಾರ) ತಡರಾತ್ರಿ 11 ಮಂದಿಯನ್ನು ಬಂಧಿಸಿದ್ದಾರೆ.

ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಿದ ಸಂಬಂಧ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಪ್ರತಿಕ್ರಿಯಿಸಿ, "ಇದೊಂದು ಬಹಳ ಖಂಡನೀಯ ಘಟನೆಯಾಗಿದ್ದು, ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಮುಂದಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಕಾಡಾನೆ ದಾಳಿಗೆ ಸಾಕಷ್ಟು ಜನರು ಬಲಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಬೃಹತ್ ಮಟ್ಟದ ಹೋರಾಟವು ಕೂಡ ನಡೆದಿದೆ. ಆದರೆ ಯಾವ ಸರ್ಕಾರವು ಹೋರಾಟಗಾರರ ಮೇಲೆ ಪ್ರಕರಣ ದಾಖಲಿಸಿರುವ ಉದಾಹರಣೆಗಳಿಲ್ಲ" ಎಂದರು.

"ಕಳೆದ ಬಿಜೆಪಿ ಸರ್ಕಾರದಲ್ಲೂ ಬೃಹತ್ ಮಟ್ಟದ ಹೋರಾಟ ನಡೆದಿದ್ದು, ಮಧ್ಯರಾತ್ರಿ ಎರಡು ಗಂಟೆಯಲ್ಲಿ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಿದ್ದರು. ನಂದ ಕುಟುಂಬಕ್ಕೆ ಸಾಂತ್ವನ ಹೇಳಿ ಪರಿಹಾರವನ್ನು ನೀಡಿದ್ದರು. ಅಂತಹ ಸಂದರ್ಭದಲ್ಲಿಯೇ ಪ್ರತಿಭಟನಾಕಾರರ ಮೇಲೆ ಯಾವ ಕ್ರಮ ಜರುಗಿಸಲಿಲ್ಲ. ಆದರೆ ಸರ್ಕಾರದ ಗಮನ ಸೆಳೆಯಲು ಹೋರಾಟ ಮಾಡಲು ಮುಂದಾದವರ ವಿರುದ್ಧ ಸರ್ಕಾರ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ಸಂಬಂಧ ನಾನು ತಾಲೂಕಿನಲ್ಲಿ ಸಭೆ ನಡೆಸಿ ಮುಂದಿನ ಹೋರಾಟದ ಹಾದಿ ಹೇಗಿರಬೇಕು ಎಂದು ತೀರ್ಮಾನ ಮಾಡುತ್ತೇನೆ" ಎಂದರು.

17 mobile phones, ganja, cigarettes were seized from the prisoners
ಕೈದಿಗಳ ಬಳಿ ಇದ್ದ 17 ಮೊಬೈಲ್‌, ಗಾಂಜಾ, ಸಿಗರೇಟ್‌ ವಶ

ಹಾಸನ ಜಿಲ್ಲಾ ಉಪ ಕಾರಾಗೃಹದ ಮೇಲೆ ಪೊಲೀಸರಿಂದ ದಿಢೀರ್​ ದಾಳಿ: ಜಿಲ್ಲಾ ಉಪ ಕಾರಾಗೃಹದ ಮೇಲೆ ಪೊಲೀಸರು ತಡರಾತ್ರಿ ದಿಢೀರ್ ದಾಳಿ ನಡೆಸಿ 17 ಮೊಬೈಲ್‌ ಸೇರಿದಂತೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. ಖಚಿತ ಮಾಹಿತಿ ಆಧಾರದ ಮೇಲೆ ಎಎಸ್‌ಪಿ ತಮ್ಮಯ್ಯ ನೇತೃತ್ವದಲ್ಲಿ ಸುಮಾರು 50ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ತಡರಾತ್ರಿ ಉಪ ಕಾರಾಗೃಹದ ಮೇಲೆ ದಾಳಿ ಮಾಡಿ, ಶೋಧಕಾರ್ಯ ನಡೆಸಿತು. ಕೈದಿಗಳ ಬಳಿ ಇದ್ದ 17 ಮೊಬೈಲ್​ಗಳು, ಗಾಂಜಾ, ಬೀಡಿ, ಸಿಗರೇಟ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಾರಾಗೃಹದಲ್ಲಿ ಸಾಕಷ್ಟು ಬಿಗಿ ಪೊಲೀಸ್ ಬಂದೋಬಸ್ತ್ ಇದ್ದರೂ, ವ್ಯವಸ್ಥೆಯನ್ನು ದಾಟಿ ಮಾದಕ ವಸ್ತುಗಳು ಹಾಗೂ ಮೊಬೈಲ್​ಗಳು ಕೈದಿಗಳ ಕೈ ಸೇರುತ್ತಿರುವುದು ಅನುಮಾನ ಹುಟ್ಟಿಸಿದೆ.

ಇದನ್ನೂ ಓದಿ: ಬಿಜೆಪಿ ಬಿಡಲ್ಲ, ಸಿಎಂ ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ದ: ಬಿಜೆಪಿ ಶಾಸಕ ಗೋಪಾಲಯ್ಯ

Last Updated : Aug 19, 2023, 6:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.