ETV Bharat / state

ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ ನಡೆಸಿದ ಕಿಡಿಗೇಡಿಗಳ ಗಡಿಪಾರಿಗೆ ಆಗ್ರಹ - Hassan District Sakleshpur Taluk

ಡಾ.ಬಿ.ಆರ್.ಅಂಬೇಡ್ಕರ್ ಅವರು ಶ್ರೇಷ್ಠ ಲಿಖಿತ ಸಂವಿಧಾನವನ್ನು ಭಾರತ ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ಅಂಬೇಡ್ಕರ್‌ ವಾಸವಿದ್ದ ರಾಜಗೃಹಕ್ಕೆ ನುಗ್ಗಿ, ಮನೆಯಲ್ಲಿದ್ದ ವಸ್ತುಗಳನ್ನ ಉದ್ದೇಶಪೂರ್ವಕವಾಗಿ ಧ್ವಂಸಗೊಳಿಸಿದ್ದಾರೆ. ಇಂತಹ ದೇಶದ್ರೋಹಿಗಳನ್ನ ಪತ್ತೆಹಚ್ಚಿ, ಗಡಿಪಾರು ಮಾಡಲು ಕೇಂದ್ರ ಗೃಹಮಂತ್ರಿಗಳು ಮುಂದಾಗಬೇಕೆಂದು ಸಕಲೇಶಪುರ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಎಸ್.ಎಂ.ಮಂಜುನಾಥ್ ಒತ್ತಾಯಿಸಿದ್ದಾರೆ.

Sakleshpur Taluk Dalit Organizations Federation Protest
ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳನ್ನ ಗಡಿಪಾರು ಮಾಡಿ..ದಲಿತ ಸಂಘಟನೆಗಳ ಒತ್ತಾಯ
author img

By

Published : Jul 9, 2020, 9:17 PM IST

ಸಕಲೇಶಪುರ (ಹಾಸನ): ಡಾ.ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಯಲ್ಲಿದ್ದ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಧ್ವಂಸಗೊಳಿಸಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಉಪವಿಭಾಗಾಧಿಕಾರಿ ಮೂಲಕ ಕೇಂದ್ರ ಗೃಹಮಂತ್ರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ ಮಾಡಿರುವ ಕಿಡಿಗೇಡಿಗಳನ್ನ ಗಡಿಪಾರು ಮಾಡಿ..ದಲಿತ ಸಂಘಟನೆಗಳ ಒತ್ತಾಯ

ಬಳಿಕ ಮಾತನಾಡಿದ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಎಸ್.ಎಂ. ಮಂಜುನಾಥ್, ಅಂಬೇಡ್ಕರ್‌ ಅವರು ಶ್ರೇಷ್ಠ ಲಿಖಿತ ಸಂವಿಧಾನವನ್ನು ಭಾರತ ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ. ಆದರೆ, ಕೆಲ ಕಿಡಿಗೇಡಿಗಳು ಮುಂಬೈನ ದಾದರ್‌ನಲ್ಲಿ ಅಂಬೇಡ್ಕರ್‌ ವಾಸವಿದ್ದ, ಐತಿಹಾಸಿಕ ಸ್ಮಾರಕವಾಗಿರುವ ರಾಜಗೃಹಕ್ಕೆ ನುಗ್ಗಿ ಮನೆಯಲ್ಲಿದ್ದ ವಸ್ತುಗಳನ್ನು ಉದ್ದೇಶಪೂರ್ವಕವಾಗಿ ಧ್ವಂಸಗೊಳಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿರುವುದರಿಂದ ಇಂತಹ ಘಟನೆ ನಡೆದಿದೆ. ಇಂತಹ ದೇಶದ್ರೋಹಿಗಳನ್ನು ಪತ್ತೆಹಚ್ಚಿ, ಗಡಿಪಾರು ಮಾಡಲು ಕೇಂದ್ರ ಗೃಹಮಂತ್ರಿಗಳು ಮುಂದಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.