ಹಾಸನ: ಲಾಕ್ಡೌನ್ ಆದೇಶ ಉಲ್ಲಂಘಿಸಿ ಮದ್ಯ ಮಾರಾಟ ಮಾಡುತ್ತಿದ್ದ ಕ್ವಾಲಿಟಿ ಬಾರ್ ಮೇಲೆ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದಾಳಿ ನಡೆಸಿದರು.
ಹಾಸನದ ಬಿ.ಎಂ. ರಸ್ತೆಯಲ್ಲಿರುವ ಕ್ವಾಲಿಟಿ ಬಾರ್ ಮತ್ತು ರೆಸ್ಟೋರೆಂಟ್ ಮೇಲೆ ಡಿಸಿ ಗಿರೀಶ್ ಸೂಚನೆ ಮೇರೆಗೆ ಉಪ ವಿಭಾಗಾಧಿಕಾರಿ ನವೀನ್ ಭಟ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ದಾಸ್ತಾನು ಸಂಗ್ರಹದ ಬಗ್ಗೆ ದಾಖಲೆ ಪರಿಶೀಲನೆ ನಡೆಸಲಾಯಿತು. ಮಾಲೀಕ ಶರತ್ನನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.