ಹಾಸನ: ಕೊರೊನಾ ವೈರಸ್ ಹಿನ್ನೆಲೆ ಲಾಕ್ಡೌನ್ ಆದೇಶ ಜಾರಿಯಲ್ಲಿದ್ದರೂ ಸಹ ಕೆಲ ಸಂಸ್ಥೆಗಳು ರಜೆ ಘೋಷಣೆ ಮಾಡದೇ ನಿರ್ಲಕ್ಷ್ಯ ತೋರಿಸಿರುವುದನ್ನು 'ಈಟಿವಿ ಭಾರತ' ವರದಿ ಮಾಡಿತ್ತು. ವರದಿ ನೋಡಿ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಕಾರ್ಮಿಕರಿಗೆ ರಜೆ ಘೋಷಣೆ ಮಾಡಿದ್ದಾರೆ.
ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಲಾಭಕ್ಕಾಗಿ ಪ್ರಾದೇಶಿಕ ಕಾರ್ಯಾಗಾರದ ಕಾರ್ಮಿಕರನ್ನು ಕೆಲಸದಲ್ಲಿ ತೊಡಗುವಂತೆ ಸೂಚಿಸಲಾಗಿತ್ತು. ಈ ಕುರಿತು ಈಟಿವಿ ಭಾರತ ವರದಿ ಮಾಡಿತ್ತು. ವರದಿ ಬೆನ್ನಲ್ಲಿಯೇ ಈಗ ಪ್ರಾದೇಶಿಕ ಕಾರ್ಯಗಾರದ ಕಾರ್ಮಿಕರುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಇದರಿಂದ ಕಾರ್ಮಿಕರು ಕೂಡ ಫುಲ್ ಖುಷಿಯಾಗಿದ್ದು, ಈ ಈಟಿವಿ ಭಾರತಕ್ಕೆ ಧನ್ಯವಾದ ತಿಳಿಸಿದ್ದಾರೆ.
ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಕಾರ್ಮಿಕರೊಬ್ಬರು, ಸಾಂಕ್ರಾಮಿಕ ರೋಗ ಹರಡುವುದನ್ನು ತಪ್ಪಿಸುವಲ್ಲಿ ಈಟಿವಿ ಭಾರತ ನಮಗೆ ಹೆಚ್ಚು ಸಹಕಾರಿಯಾಗಿದೆ. ನಿಮ್ಮ ವಾಹಿನಿ ಬಂದ ಬಳಿಕ ನಮಗೆ ಮೇಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹಾಗಾಗಿ ತಮಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದರು.