ETV Bharat / state

ಮಕ್ಕಳಿಗೆ ಮಾನಸಿಕ ಒತ್ತಡ ಹೇರುವುದು ಬೇಡ: ಶಾಸಕ ಹೆಚ್.ಕೆ.ಕುಮಾರಸ್ವಾಮಿ

ಸಕಲೇಶಪುರ ಪಟ್ಟಣದ ಸಂತ ಜೋಸೆಫ್​​ ಶಾಲಾ ಆವರಣದಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಎಸ್​ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಶಾಸಕ ಹೆಚ್.ಕೆ.ಕುಮಾರಸ್ವಾಮಿ ಚಾಲನೆ ನೀಡಿದರು.

author img

By

Published : Jun 20, 2020, 5:31 PM IST

Scout and Guides Free Mask DistributionScout and Guides Free Mask Distribution
ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಎಸ್​ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ

ಸಕಲೇಶಪುರ: ವಿದ್ಯಾರ್ಥಿಗಳಿಗೆ ಮಾನಸಿಕ ಒತ್ತಡ ಹೇರುವ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬಾರದು ಎಂದು ಶಾಸಕ ಹೆಚ್.ಕೆ.ಕುಮಾರಸ್ವಾಮಿ ಹೇಳಿದರು.

ಸ್ಕೌಟ್ಸ್​ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಎಸ್​ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ

ಪಟ್ಟಣದ ಸಂತ ಜೋಸೆಫ್​​ ಶಾಲಾ ಆವರಣದಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಎಸ್​ಎಸ್ಎಲ್​​ಸಿ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರ ಎಸ್​ಎಸ್ಎಲ್​​ಸಿ ಪರೀಕ್ಷೆ ಆಯೋಜಿಸಿರುವುದು ಒಳ್ಳೆಯ ಬೆಳವಣಿಗೆ. ಯಾವುದೇ ಗೊಂದಲವಾಗದಂತೆ ತಾಲೂಕು ಆಡಳಿತ ಎಚ್ಚರಿಕೆಯಿಂದ ಪರೀಕ್ಷೆಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಸ್ಕೌಟ್ಸ್​ ಮತ್ತು ಗೈಡ್ಸ್​ ಸಂಸ್ಥೆ ಸುಮಾರು 1,500 ಮಾಸ್ಕ್​​​ಗಳನ್ನು ನೀಡುತ್ತಿರುವುದು ಉತ್ತಮ ಕಾರ್ಯ. ಉತ್ತಮ ಸಮಾಜ ನಿರ್ಮಾಣ ಕಾರ್ಯದಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್ ಪಾತ್ರ ಮಹತ್ವದ್ದಾಗಿದೆ. ಮುಂದಿನ ದಿನಗಳಲ್ಲಿ ಸ್ಕೌಟ್ಸ್​ ಮತ್ತು ಗೈಡ್ಸ್ ಸಂಸ್ಥೆ ಸ್ವಂತ ಕಟ್ಟಡ ಕಟ್ಟಿಕೊಳ್ಳಲು ನಾನು ಅನುದಾನ ಕೊಡುತ್ತೇನೆ ಎಂದು ಭರವಸೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.