ಅರಕಲಗೂಡು: ಕೊಣನೂರು ಹೋಬಳಿಯ ಸರಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಿದ್ಧಾಪುರ ಗ್ರಾಮದಲ್ಲಿ ವರ್ತಕರ ಸಂಘದ ವತಿಯಿಂದ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2:30 ರವರೆಗೆ ಮಾತ್ರವೇ ವ್ಯಾಪಾರ ವಹಿವಾಟು ನಡೆಸಲು ನಿರ್ಧಾರ ಕೈಗೊಳ್ಳಲಾಯಿತು.
ಇತ್ತೀಚಿನ ದಿನಗಳಲ್ಲಿ ಕೊರೊನಾ ವೈರಸ್ ಗ್ರಾಮೀಣ ಪ್ರದೇಶಗಳಲ್ಲೂ ಸಹ ವ್ಯಾಪಿಸಿಕೊಂಡಿರುವ ಆತಂಕಕಾರಿ ಸ್ಥಿತಿಯನ್ನು ಮನಗಂಡು ಗ್ರಾಮಸ್ಥರು ಮತ್ತು ವರ್ತಕರ ಸಂಘದವರು ಸ್ವಯಂ ಪ್ರೇರಿತರಾಗಿ ಲಾಕ್‍ಡೌನ್ ಮಾಡಲು ನಿರ್ಧಾರ ಮಾಡಿದ್ದಾರೆ.