ETV Bharat / state

Short circuit: ಹಾಸನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್ : ಎಚ್ಚೆತ್ತ ಸಿಬ್ಬಂದಿಯಿಂದ 24 ಶಿಶುಗಳ ರಕ್ಷಣೆ

ಹಾಸನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಹೊಗೆ ತುಂಬಿಕೊಂಡಿದ್ದರಿಂದ ತುರ್ತು ನಿಗಾ ಘಟಕದಲ್ಲಿ 24 ಶಿಶುಗಳನ್ನು ಬೇರೆಡೆಗೆ ಸ್ಥಳಾಂತರಿಸಿರುವ ಘಟನೆ ನಡೆದಿದೆ.

short-circuit-in-hassan-govt-hospitals-icu-newborn-babies-saved-from-danger
ಹಾಸನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್ : ಅಪಾಯದಿಂದ ಪಾರಾದ ನವಜಾತ ಶಿಶುಗಳು
author img

By

Published : Jul 2, 2023, 7:51 PM IST

Updated : Jul 2, 2023, 8:45 PM IST

ಹಾಸನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಶಾರ್ಟ್ ಸರ್ಕ್ಯೂಟ್

ಹಾಸನ : ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಹೊಗೆ ತುಂಬಿದ್ದರಿಂದ ತುರ್ತು ನಿಗಾ ಘಟಕದಲ್ಲಿದ್ದ ಶಿಶುಗಳನ್ನು ತಕ್ಷಣ ಬೇರೆಡೆಗೆ ಸ್ಥಳಾಂತರಿಸಿರುವ ಘಟನೆ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಮಧ್ಯಾಹ್ನ ನಡೆದಿದೆ. ಸರ್ಕಾರಿ ಜಿಲ್ಲಾಸ್ಪತ್ರೆಯ ಐಸಿಯು ವಾರ್ಡಿನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದಾಗಿ ವಾರ್ಡ್​ನಲ್ಲಿ ಸಂಪೂರ್ಣ ಹೊಗೆ ಆವರಿಸಿದೆ. ಬಳಿಕ ತಕ್ಷಣ ಎಚ್ಚೆತ್ತ ಆಸ್ಪತ್ರೆಯ ಸಿಬ್ಬಂದಿ ನವಜಾತ ಶಿಶುಗಳನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ.

ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿರುವ ಮಕ್ಕಳ ಐಸಿಯು ವಾರ್ಡ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಈ ವೇಳೆ ಇಲ್ಲಿನ ಹಾಲ್ ತುಂಬೆಲ್ಲ ಹೊಗೆ ಆವರಿಸಿದೆ. ಇದರಿಂದಾಗಿ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಯಿತು. ಈ ವೇಳೆ ಎಚ್ಚೆತ್ತ ಆರೋಗ್ಯ ಸಿಬ್ಬಂದಿಗಳು ಕೊಠಡಿಯ ಕಿಟಕಿ ಗಾಜುಗಳನ್ನು ಒಡೆದು, ಐಸಿಯುನಲ್ಲಿದ್ದ 24 ನವಜಾತ ಶಿಶುಗಳು ರಕ್ಷಿಸಿದ್ದಾರೆ. ಹೊಗೆ ತುಂಬಿಕೊಂಡ ಹಿನ್ನೆಲೆ ಮಕ್ಕಳ ಪೋಷಕರು ದಿಗ್ಭಾಂತರಾಗಿದ್ದರು. ಸದ್ಯ ಎಲ್ಲಾ ಮಕ್ಕಳು ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.

ಸ್ಥಳಕ್ಕೆ ಹಿಮ್ಸ್‌ನ ನಿರ್ದೇಶಕರಾದ ಬಿ.ಸಿ. ರವಿಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಕೃಷ್ಣಮೂರ್ತಿ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವ ರೀತಿ ಶಾರ್ಟ್ ಸರ್ಕ್ಯೂಟ್ ಆಗಿದೆ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

ಗರ್ಭಿಣಿ ಮಹಿಳೆಗೆ ಬಸ್​ನಲ್ಲೇ ಹೆರಿಗೆ : ರಾಜ್ಯ ಸಾರಿಗೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಮಾರ್ಗ ಮಧ್ಯದಲ್ಲಿಯೇ ಬಸ್​ ಮಹಿಳಾ‌ ನಿರ್ವಾಹಕಿ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ನಡೆದಿತ್ತು.

ಚಿಕ್ಕಮಗಳೂರು ವಿಭಾಗದ ವಾಹನ ಸಂಖ್ಯೆ ಕೆ.ಎ-18, ಎಫ್- 0865 ಬಸ್​ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಮಧ್ಯೆ ಸಂಚರಿಸುವ ವೇಳೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ ಬಸ್​ನಲ್ಲಿ ಮಹಿಳೆಗೆ ಹೆರಿಗೆ ಮಾಡಿಸಲಾಗಿತ್ತು. ಈ ವೇಳೆ ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.

ಇದರಲ್ಲಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಈ ಬಸ್​​ ಸಾಗುವ ಮಾರ್ಗದಲ್ಲಿ ಹತ್ತಾರು ಕಿಲೋಮೀಟರ್‌ ದೂರದಲ್ಲಿ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಹೀಗಾಗಿ ಬಸ್ಸಿನಲ್ಲಿದ್ದ ಮಹಿಳಾ ಕಂಡಕ್ಟರ್‌ ಬಸ್​ನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ್ದರು.

ಹೆಣ್ಣು ಮಗುವಿಗೆ ಜನ್ಮ ನೀಡಿದ್ದ ಮಹಿಳೆ : ಬಸ್​ ನಿರ್ವಾಹಕಿ ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದು, ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಅಲ್ಲದೆ ಗರ್ಭಿಣಿಯ ಕುಟುಂಬದ ಸದಸ್ಯರು ಆರ್ಥಿಕವಾಗಿ ದುರ್ಬಲರಾಗಿದ್ದ ಕಾರಣ ಯಾವುದೇ ಖಾಸಗಿ ಕಾರು ಅಥವಾ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಹೋಗಲಾಗದೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಚಾರ ಮಾಡುತ್ತಿದ್ದರು ಎಂದು ತಿಳಿದುಬಂದಿತ್ತು. ಈ ಸಂಬಂಧ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಮತ್ತು ನಿರ್ವಾಹಕರು ಸೇರಿ ಮಹಿಳೆಗೆ ಖರ್ಚಿಗೆಂದು 1500 ರೂ ಕೊಟ್ಟು ಕಳುಹಿಸಿದ್ದರು.

ಇದನ್ನೂ ಓದಿ : ಮಂಡ್ಯ: ಹೊತ್ತಿ ಉರಿದ ಮೆಡಿಸಿನ್​ ಫಾರ್ಮ್, ಔಷಧ ನಾಶ

Last Updated : Jul 2, 2023, 8:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.