ಚನ್ನರಾಯಪಟ್ಟಣ: ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ 4 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಾಸಕರು ಕೊರೊನಾ ಪರೀಕ್ಷೆ ಮಾಡಿಸಿದ್ದರು. ಆದರೆ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮತ್ತೆ ಸಿಟಿ ಸ್ಕ್ಯಾನಿಂಗ್ ಮಾಡಿಸಿದ್ದಾರೆ. ಈ ವೇಳೆ ವೈದ್ಯರು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಸಲಹೆ ನೀಡಿದ್ದರು.
ಈ ಬಗ್ಗೆ ಮಾಹಿತಿ ನೀಡಿರುವ ಶಾಸಕರು, ಕ್ಷೇತ್ರದ ಜನರಿಗೆ ತೊಂದರೆಯಾಗಬಾರದೆಂದು ಬೆಂಗಳೂರಿಗೆ ಬಂದಿರುತ್ತೇನೆ. ಆದಷ್ಟು ಬೇಗನೆ ಗುಣಮುಖನಾಗಿ ಕ್ಷೇತ್ರದ ಜನರ ಕಷ್ಟ-ಸುಖದಲ್ಲಿ ಭಾಗಿಯಾಗುತ್ತೇನೆ. ನನ್ನ ಆಪ್ತ ಸಹಾಯಕರ ದೂರವಾಣಿಗೆ ಕರೆಮಾಡಿ ನಿಮ್ಮ ಸಮಸ್ಯೆಗಳಿದ್ದರೆ ತಿಳಿಸಿ. ಪರಿಹರಿಸಲು ನಿರ್ದೇಶನ ನೀಡಿರುತ್ತೇನೆ ಎಂದಿದ್ದಾರೆ.