ETV Bharat / state

ರಾಜಕೀಯ ಪಾರುಪತ್ಯಕ್ಕಾಗಿ ಸಿದ್ದರಾಮಯ್ಯ ಸಾವರ್ಕರ್​ರನ್ನು ಟೀಕಿಸುತ್ತಿದ್ದಾರೆ: ಕೆ.ಎಸ್. ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಕುಟುಂಬ ಸದಸ್ಯರೊಂದಿಗೆ ಹಾಸನಾಂಬೆ ದೇವಿ ದರ್ಶನ ಪಡೆದರು. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಟೀಕಿಸಿ, ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ರಾಜಕೀಯವಾಗಿ ರಾಜ್ಯದಲ್ಲಿ ಪಾರುಪತ್ಯ ಸಾಧಿಸುವ ಉದ್ದೇಶ ಸಿದ್ದರಾಮಯ್ಯ ಅವರದು ಎಂದು ಟೀಕಿಸಿದರು.

kse
author img

By

Published : Oct 20, 2019, 4:23 AM IST

ಹಾಸನ: ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ರಾಜಕೀಯವಾಗಿ ರಾಜ್ಯದಲ್ಲಿ ಪಾರುಪತ್ಯ ಸಾಧಿಸಬಹುದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಟೀಕಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

ಶನಿವಾರ ರಾತ್ರಿ ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಅಂಡಬಾರ್ ನಿಕೋಬಾರ್​ನಲ್ಲಿ ಶಿಕ್ಷೆ ಅನುಭವಿಸಿದ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ವೀರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವ್ಯಕ್ತಿಗಳ ಕುರಿತು ಅವಹೇಳನಕಾರಿಯಾಗಿ ಮಾತಾಡುವ ವ್ಯಕ್ತಿ ನಮ್ಮ ರಾಜ್ಯದ ಸಿಎಂ ಆಗಿದ್ದರು ಹಾಗೂ ಇದೀಗ ಪ್ರತಿಪಕ್ಷ ನಾಯಕರಾಗಿದ್ದಾರೆ ಎನ್ನುವುದು ದೊಡ್ಡ ದುರಂತ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ

ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಜಲ ಪ್ರಳಯ ಕಡಿಮೆ ಮಾಡೆಂದು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ. ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ದಿನೇಶ್ ಗುಂಡೂರಾವ್ ಅವರ ಆರೋಪ ಸತ್ಯಕ್ಕೆ ದೂರವಾದುದು.

ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಎನ್ನುವ ಹಾಗೆ ಗುಂಡೂರಾವ್​ಗೆ ಯಾಕೆ ಈ ಅನುಮಾನ ಬಂತು, ಕಾಂಗ್ರೆಸ್​ನವರೆಲ್ಲ ಸತ್ಯ ಹರಿಶ್ಚಂದ್ರನ ಹಾಗೆ ಮಾತಾಡುತ್ತಿದ್ದರು, ಈಗ ಅಕ್ರಮ ಆಸ್ತಿ ಸಿಕ್ಕ ಮೇಲೆ ತಣ್ಣಗಾಗಲಿಲ್ಲವೇ ಎಂದು ವ್ಯಂಗ್ಯವಾಡಿದರು.

Intro:ಹಾಸನ: ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ರಾಜಕೀಯವಾಗಿ ರಾಜ್ಯದಲ್ಲಿ ಪಾರುಪತ್ಯ ಸಾಧಿಸಬಹುದು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಟೀಕಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಶನಿವಾರ ರಾತ್ರಿ ಹಾಸನಾಂಬೆ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಂಡಬಾರ್ ನಿಕೋಬಾರ್ ನಲ್ಲಿ ಶಿಕ್ಷೆ ಅನುಭವಿಸಿದ ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್, ವೀರ ಸಾವರ್ಕರ್ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವ್ಯಕ್ತಿಗಳ ಕುರಿತು ಅವಹೇಳನಕಾರಿಯಾಗಿ ಮಾತಾಡುವ ವ್ಯಕ್ತಿ ನಮ್ಮ ರಾಜ್ಯದ ಸಿಎಂ ಆಗಿದ್ದರು ಹಾಗೂ ಪ್ರತಿಪಕ್ಷ ನಾಯಕರಾಗಿದ್ದಾರೆ ಎನ್ನುವುದು ದೊಡ್ಡ ದುರಂತ ಎಂದರು.
ಪ್ರತಿ ವರ್ಷದಂತೆ ಈ ವರ್ಷವೂ ಹಾಸನಾಂಬೆ ದರ್ಶನಕ್ಕೆ ಬಂದಿದ್ದೇನೆ. ಜಲ ಪ್ರಳಯ ಕಡಿಮೆ ಮಾಡೆಂದು ತಾಯಿಯಲ್ಲಿ ಪ್ರಾರ್ಥಿಸಿದ್ದೇನೆ.
ಸಿದ್ದರಾಮಯ್ಯ ಅವರನ್ನು ಜೈಲಿಗೆ ಕಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ದಿನೇಶ್ ಗುಂಡೂರಾವ್ ಅವರ ಆರೋಪ ಸತ್ಯಕ್ಕೆ ದೂರವಾದುದು.
ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ ಎನ್ನುವ ಹಾಗೆ ಗುಂಡೂರಾವ್ ಗೆ ಯಾಕೆ ಈ ಅನುಮಾನ ಬಂತು. ಕಾಂಗ್ರೆಸ್ ನವರೆಲ್ಲ ಸತ್ಯ ಹರಿಶ್ಚಂದ್ರನ ಹಾಗೆ ಮಾತಾಡುತ್ತಿದ್ದರು. ಅಕ್ರಮ ಆಸ್ತಿ ಸಿಕ್ಕ ಮೇಲೆ ತಣ್ಣಗಾಗಲಿಲ್ಲವೇ ಎಂದು ವ್ಯಂಗ್ಯವಾಡಿದರು.
ಈಶ್ವರಪ್ಪ ಕುಟುಂಬ ಸದಸ್ಯರು ದೇವಿ ದರ್ಶನ ಪಡೆದರು. ನೀರಿನ ವಿಚಾರಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಗೋವಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಮಹದಾಯಿ ವಿವಾದ ಬಗೆಹರಿಸುವ ಭರವಸೆ ನೀಡಿದ್ದರು.
ಅನರ್ಹ ಶಾಸಕ ಎಚ್. ವಿಶ್ವನಾಥ್ ರಾತ್ರಿ 10.30ಕ್ಕೆ ದೇವಿ ದರ್ಶನ ಪಡೆದರು.Body:ಬೈಟ್ 1 : ಈಶ್ವರಪ್ಪ, ಸಚಿವ. Conclusion:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.