ETV Bharat / state

ಅಮ್ಮನಿಗೆ ಕೊರೊನಾ ಸೋಂಕು : ಮನನೊಂದ ಮಗ ಆತ್ಮಹತ್ಯೆಗೆ ಶರಣು - ಹಾಸನ ಆಸ್ಪತ್ರೆಯಲ್ಲಿ ಯುವಕ ಸಾವು

ಮೃತನ ತಾಯಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ ಹಾಸನದ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ದಿನಗಳಿಂದ ಚಿಕಿತ್ಸೆ ನೀಡಲಾಗ್ತಿದೆ..

Son Committed suicide after mother tested Covid positive
ಹಾಸನ ಆಸ್ಪತ್ರೆಯಲ್ಲಿ ಯುವಕ ಸಾವು
author img

By

Published : Apr 26, 2021, 2:25 PM IST

Updated : Apr 26, 2021, 2:48 PM IST

ಹಾಸನ : ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ತಾಯಿಯ ಸಂಕಷ್ಟ ನೋಡಲಾಗದೆ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.

ಶರತ್ ಕುಮಾರ್ (30) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಕೊಡಗು ಜಿಲ್ಲೆ ಶನಿವಾರಸಂತೆ ಸಮೀಪದ ಮಾದರೆ ಗ್ರಾಮದವರಾದ ಶರತ್​, ಬೆಂಗಳೂರಿನ ರಿಲಾಯನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಕೆಲಸ ತೊರೆದು ಊರಿಗೆ ಬಂದಿದ್ದರು.

ಮೃತನ ತಾಯಿಗೆ ಕೋವಿಡ್ ಸೋಂಕು ತಗುಲಿರುವ ಕಾರಣ ಹಾಸನದ ಜಯ ಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದ್ದು, 11 ದಿನಗಳಿಂದ ಚಿಕಿತ್ಸೆ ನೀಡಲಾಗ್ತಿದೆ. ತಾಯಿ ಆಸ್ಪತ್ರೆಯಲ್ಲಿ ಅನುಭವಿಸುತ್ತಿರುವ ನೋವಿನಿಂದ ನೊಂದು ಶರತ್ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಓದಿ : ಕೊರೊನಾ ಬಂತೆಂದು ಧರ್ಮಪತ್ನಿಯನ್ನೇ ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ

ನಿನ್ನೆ ರಾತ್ರಿ ಸಹೋದರ ಶಶಿಕುಮಾರ್​ಗೆ ಕರೆ ಮಾಡಿದ್ದ ಶರತ್​, ಅಮ್ಮ ತುಂಬಾ ನೋವು ಅನುಭವಿಸುತ್ತಿದ್ದಾರೆ. ನನ್ನಿಂದ ಇದನ್ನು ನೋಡಲು ಸಾಧ್ಯವಿಲ್ಲ ದಯಮಾಡಿ ಆಸ್ಪತ್ರೆಗೆ ಬಾ ಎಂದಿದ್ದನಂತೆ. ಸಹೋದರ ಆಸ್ಪತ್ರೆಗೆ ಬಂದು ನೋಡಿದಾಗ ಅಲ್ಲಿ ಶರತ್​ ಇರಲಿಲ್ಲ. ಇಂದು ಬೆಳಗ್ಗೆ ಆಸ್ಪತ್ರೆಯ ಏಳನೇ ಮಹಡಿಯ ಮೇಲೆ ನೀರಿನ ಟ್ಯಾಂಕ್​ನ ಪೈಪ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸ್ಥಳಕ್ಕೆ ಹಾಸನ ನಗರ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Last Updated : Apr 26, 2021, 2:48 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.