ಹಾಸನ: ಅರಸೀಕೆರೆ ನಗರದ ಹಾಸನ ರಸ್ತೆಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಷು ಕಣಿ ಪೂಜೆಯ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ, ಅಲಂಕಾರ ಭಕ್ತರಿಗೆ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿತ್ತು.
ದೇವಸ್ಥಾನದ ಅಧ್ಯಕ್ಷ ಪುರುಷೋತ್ತಮ ಮಾತನಾಡಿ, ಕರ್ನಾಟಕದಲ್ಲಿ ಚಂದ್ರಮಾನ ಯುಗಾದಿ ಆಚರಿಸುವ ರೀತಿ ಕೇರಳ ತಮಿಳುನಾಡಿನಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಆ ಮೂಲಕ ನೂತನ ವರ್ಷವನ್ನು ಪ್ರಾರಂಭಿಸುತ್ತಾರೆ. ಅದರ ವಿಶೇಷವಾಗಿ ರೈತರು ಬೆಳೆದ ತರಕಾರಿ ಹೂವು ಹಣ್ಣುಗಳನ್ನು ದೇವರ ಮುಂದೆ ಇಟ್ಟು ಪೂಜೆ ನೆರವೇರಿಸಲಾಗುವುದು. ಈ ಸಂದರ್ಭದಲ್ಲಿ ಕೊರೊನಾ ಮಹಾಮಾರಿ ಬೇಗನೆ ತೊಲಗಲಿ ವಿಶ್ವ ಸಮೃದ್ಧಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಲಾಯಿತು ಎಂದು ತಿಳಿಸಿದರು.