ETV Bharat / state

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಸ್ತಂಗತ; ಸಿಎಂ, ಗಣ್ಯರ ಸಂತಾಪ

ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

charukeerthi bhattaraka swamiji
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
author img

By

Published : Mar 23, 2023, 10:28 AM IST

Updated : Mar 23, 2023, 12:13 PM IST

ಹಾಸನ: ಜೈನರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಜಿಲ್ಲೆಯ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಇಂದು ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಸ್ವಾಮೀಜಿ ಅನಾರೋಗ್ಯದಿಂದ ಬಳಲುತ್ತಿದ್ದರು. ಜೈನ ಸಮಾಜದ ಮಾರ್ಗದರ್ಶಕರು,ˌಧರ್ಮ ಪ್ರವರ್ತಕರೂ ಆಗಿದ್ದ ಶ್ರೀಗಳು ಸಮಸ್ತ ದಿಗಂಬರ ಜೈನ ಸಮಾಜದ ಏಳಿಗೆಗೆ ಶ್ರಮಿಸಿದ್ದಾರೆ. ಶ್ರೀಗಳು ಸರ್ವಧರ್ಮ ಸಮಾನತೆಯ ತತ್ವದಲ್ಲಿ ನಂಬಿಕೆ ಉಳ್ಳವರಾಗಿದ್ದರು. ಲಕ್ಷಾಂತರ ಶ್ರಾವಕರು, ಅನುಯಾಯಿಗಳಿಗೆ ಇವರು ಮಾರ್ಗದರ್ಶನ ನೀಡಿದ್ದಾರೆ.

  • ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ.
    1/2 pic.twitter.com/ljRit1Nof1

    — Basavaraj S Bommai (@BSBommai) March 23, 2023 " class="align-text-top noRightClick twitterSection" data=" ">

ಸಿಎಂ ಸಂತಾಪ: ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಯಡಿಯೂರಪ್ಪ ಸಂತಾಪ​: ಶ್ರವಣಬೆಳಗೊಳ ಜೈನ ಮಠದ ಪರಮಪೂಜ್ಯ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಜಿನೈಕ್ಯರಾಗಿರುವ ಸುದ್ದಿ ಅತೀವ ದುಃಖ ತಂದಿದೆ. ಪೂಜ್ಯರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಅವರ ಭಕ್ತರಿಗೆ ಈ ಅಗಲಿಕೆಯನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ- ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ.

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸಹ ಟ್ವೀಟ್​ ಮಾಡಿ, ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖವುಂಟಾಗಿದೆ. ಸ್ವಾಮೀಜಿಗಳು ದೇಶಾದ್ಯಂತ ಅಪಾರ ಭಕ್ತ ವರ್ಗ ಹೊಂದಿದ್ದರು. ಅವರ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ ಬಹಳ ನಷ್ಟವಾಗಿದೆ. ಸ್ವಾಮೀಜಿಗಳ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸಿದ್ದಾರೆ.

  • ಶ್ರವಣಬೆಳಗೊಳದ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು.
    ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ.
    ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ. pic.twitter.com/AKtNpZrzPx

    — Siddaramaiah (@siddaramaiah) March 23, 2023 " class="align-text-top noRightClick twitterSection" data=" ">

ಸಿದ್ದರಾಮಯ್ಯ ಸಂತಾಪ: ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಹ ಟ್ವೀಟ್ ಮಾಡಿ, ಶ್ರವಣಬೆಳಗೊಳದ ಶ್ರೀ ಜೈನಪೀಠದ ಜಗದ್ಗುರುಗಳಾದ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಅವರು ಅಗಲಿದ ವಿಷಯ ಕೇಳಿ ನನಗೆ ತೀವ್ರ ಆಘಾತ ಉಂಟಾಗಿದೆ. ಶ್ರೀ ಭಗವಾನ್ ಬಾಹುಬಲಿ ಅವರ ಶಾಂತಿ, ಅಹಿಂಸೆ, ಸಹನೆ ತತ್ವಗಳನ್ನು ಪಸರಿಸುತ್ತಾ ಜನರಲ್ಲಿ ಅರಿವಿನ ಬೆಳಕು ಮೂಡಿಸಿದ್ದ ಪರಮಪೂಜ್ಯರು ನಾಡಿಗೆ ಅಪಾರ ಸೇವೆ ಸಲ್ಲಿಸಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಮಠದ ಭಕ್ತರು, ನಾಡಿನ ಜನರಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ: ಇನ್ನು ಸ್ವಾಮೀಜಿಯವರ ಅಂತಿಮ ದರ್ಶನಕ್ಕೆ ಸ್ಥಳೀಯ ಆಡಳಿತ ಹಾಗೂ ಜಿಲ್ಲಾಡಳಿತ ಸಕಲ ವ್ಯವಸ್ಥೆ ಮಾಡುತ್ತಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ನಾಯಕರು ದರ್ಶನ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯ ಹಾಗು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಇದನ್ನೂ ಓದಿ: ಜೈನ ಧರ್ಮ ಪಾಲಿಸಿದ್ದರೆ ಜಗತ್ತಿನಲ್ಲಿ ಹಿಂಸೆಯೇ ಇರುತ್ತಿರಲಿಲ್ಲ: ಸಿಎಂ ಬೊಮ್ಮಾಯಿ

Last Updated : Mar 23, 2023, 12:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.