ETV Bharat / state

ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​​ಆರ್​ಟಿಸಿ ಸಿಬ್ಬಂದಿ - ಹಾಸನ ಆತ್ಮಹತ್ಯೆ ಸುದ್ದಿ

ಕೆಎಸ್​ಆರ್​ಟಿಸಿಯ ಹಿರಿಯ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿ ರವಿಶಂಕರ್​ (42) ಡಿಪೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕರ್ತವ್ಯನಿರತ ವೇಳೆ ಮೇಲಧಿಕಾರಿಗಳು ಮತ್ತು ರವಿಶಂಕರ್​ ನಡುವೆ ವಾಕ್​ ಸಮರ ಉಂಟಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
author img

By

Published : Nov 13, 2019, 6:41 AM IST

Updated : Nov 13, 2019, 7:08 AM IST

ಹಾಸನ: ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಿಬ್ಬಂದಿ ಡಿಪೋದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ಅರಸೀಕೆರೆ ನಗರದ ಜೇನುಕಲ್ಲು ಬಡಾವಣೆಯ ರವಿಶಂಕರ್ (42) ಆತ್ಮಹತ್ಯೆಗೆ ಯತ್ನಿಸಿದ ಕೆಎಸ್ಆರ್​ಟಿಸಿಯ ಸಿಬ್ಬಂದಿ. ಚಿಕ್ಕಮಗಳೂರು ಜಿಲ್ಲಾ ವ್ಯಾಪ್ತಿಗೆ ಒಳಪಡುವ ಅರಸೀಕೆರೆಯ ಕೆಎಸ್ಆರ್​ಟಿಸಿ ಡಿಪೋದಲ್ಲಿ ಈ ಘಟನೆ ನಡೆದಿದೆ. ಕರ್ತವ್ಯನಿರತ ಸಂದರ್ಭದಲ್ಲಿಯೇ ಮೇಲಧಿಕಾರಿಗಳ ಹಾಗೂ ರವಿಶಂಕರ್​ ನಡುವೆ ಮಾತಿನ ಚಕಮಕಿ ಜೋರಾಗಿ ನಡೆದಿದ್ದು, ಬಳಿಕ ಮನನೊಂದು ರವಿಶಂಕರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದೇ ಡಿಪೋದಲ್ಲಿ ಅಸಿಸ್ಟೆಂಟ್ ಸೂಪರ್​ವೈಸರ್ ಆಗಿರುವ ಮಹೇಶ್ ಎಂಬುವರು ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ರವಿಶಂಕರ್​ಗೆ ಇಂಧನ ತುಂಬಿಸುವ ಕೆಲಸಕ್ಕೆ ನಿಯೋಜನೆ ಮಾಡಿದ್ದರು. ರವಿಶಂಕರ್​ಗೆ ಈ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಬೇರೊಂದು ಕೆಲಸದ ವಿಭಾಗಕ್ಕೆ ವರ್ಗಾಯಿಸುವಂತೆ ಮನವಿ ಮಾಡಿದ್ದರೂ ಮಹೇಶ್ ಅವರು ರವಿಶಂಕರ್​ಗೆ ಕಿರುಕುಳ ನೀಡುತ್ತಲೇ ಇದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆಪಾದಿಸಲಾಗಿದೆ.

ಇಂತಹದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆಯೂ ಓರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿತ್ತು. ಅರಸೀಕೆರೆಯ ಡಿಪೋದಲ್ಲಿ ನಡೆದ ಎರಡನೆಯ ಘಟನೆ ಇದಾಗಿದೆ. ರವಿಶಂಕರ್ ಅವರನ್ನು ಅರಸೀಕೆರೆಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ಪೋಷಕರು ಅರಸೀಕೆರೆ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Intro:Body:Conclusion:
Last Updated : Nov 13, 2019, 7:08 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.