ಹಾಸನ: ಕೋವಿಡ್ -19 ಹಿನ್ನೆಲೆ ಕೆಪಿಟಿಸಿಎಲ್ ವತಿಯಿಂದ ತಮ್ಮ ಸಿಬ್ಬಂದಿಗೆ ಮುನ್ನೆಚ್ಚರಿಕಾ ಕ್ರಮವಾಗಿ, ಪ್ರತಿನಿತ್ಯ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ನಗರದ ಸಂತೇಪೇಟೆ ಬಳಿಯಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿಗೆ ಆಗಮನದ ವೇಳೆ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡುವ ಮೂಲಕ ಸಿಬ್ಬಂದಿಯನ್ನು ಕಚೇರಿಗೆ ಬರಮಾಡಿಕೊಳ್ಳಲಾಗುತ್ತಿದೆ. ಪ್ರತಿನಿತ್ಯ 110 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬೆಳಗ್ಗೆ ಹಾಗೂ ಸಂಜೆ ಥರ್ಮಲ್ ಸ್ಕ್ರೀನಿಂಗ್ ಮಾಡುವ ಮೂಲಕ ವಿದ್ಯುತ್ ಇಲಾಖೆ ಕೊರೊನಾ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸಿದೆ.
ಇದಲ್ಲದೆ ಗೇಟ್ ಬಳಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗೆ ಸ್ಯಾನಿಟೈಸರ್ ನೀಡಿ ಸ್ವಚ್ಚತೆಗೆ ಆದ್ಯತೆ ನೀಡಲಾಗುತ್ತಿದೆ. ಇನ್ನು ಪ್ರತಿನಿತ್ಯ ನಿಗಮದ ಸಹಾಯಕ ಕಾರ್ಯಪಾಲಕ ಅಧಿಕಾರಿ ಪ್ರಸನ್ನ ಥರ್ಮಲ್ ಸ್ಕ್ರೀನಿಂಗ್ ನಡೆಸುತ್ತಿದ್ದಾರೆ.