ಚನ್ನರಾಯಪಟ್ಟಣ : ನಗರದ ಪೊಲೀಸ್ ಠಾಣೆಯ ಪಿಎಸ್ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಚನ್ನರಾಯಪಟ್ಟಣದಲ್ಲಿ ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆಯಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರಮಂದಿರದಿಂದ ಸರ್ಕಾರಿ ಆಸ್ಪತ್ರೆ ವೃತ್ತದ ಮುಖಾಂತರ ಮಿನಿ ವಿಧಾನಸೌಧಕ್ಕೆ ಸುಮಾರು 35 ಜನ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಮೌನ ಪ್ರತಿಭಟನೆ ಮಾಡಿದರು. ತಾಲೂಕು ಕಚೇರಿ ಕಚೇರಿ ಮುಂದೆ ಪ್ರತಿಭಟನಾನಿರತ ಶ್ರೀನಿವಾಸ ಅವರು ಮಾತನಾಡಿ, ಕಿರಣ್‌ಕುಮಾರ್ ಸಾವಿನ ಹಿಂದೆ ಯಾರ ಕೈವಾಡವಿದೆ. ಯಾವ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡರು ಎಂಬ ಕಾರಣ ನಮಗೆ ತಿಳಿಯಬೇಕು. ಈ ಕುರಿತು ಸಿಬಿಐ ತನಿಖೆಯಾಗಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು.
ಇನ್ನು, ಕಿರಣ್‌ಕುಮಾರ್ ಮಕ್ಕಳಿಗೆ ಎಜುಕೇಷನ್ ಹಾಗೂ ಹೆಂಡತಿಗೆ ಸರ್ಕಾರಿ ಕೆಲಸ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.