ಹಾಸನ: ಬಟ್ಟೆ ತೊಳೆಯಲು ಹೋದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದ ಹೊರವಲಯದಲ್ಲಿ ಸಂಭವಿಸಿದೆ.
ಪ್ರತಿಶ್ (17) ಮೃತಪಟ್ಟ ವಿದ್ಯಾರ್ಥಿಯಾಗಿದ್ದು ಮೂಲತಃ ಮಂಡ್ಯ ಜಿಲ್ಲೆಯವನು ಎಂದು ಗುರುತಿಸಲಾಗಿದೆ. ಹಾಸ್ಟೆಲ್ನಲ್ಲಿ ನೀರಿಲ್ಲದ ಕಾರಣ ಬಟ್ಟೆ ತೊಳೆಯಲು ಸಮೀಪವಿರುವ ಹೇಮಾವತಿ ನದಿಗೆ ಸಹಪಾಠಿಗಳ ಜೊತೆ ತೆರಳಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿ ಹೊಳೆನರಸೀಪುರ ಸಮೀಪದ ತಟ್ಟೆಕೆರೆ ಗ್ರಾಮದಲ್ಲಿರುವ ಡಿಪ್ಲೋಮಾ ಕಾಲೇಜಿನಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ವ್ಯಾಸಂಗ ಮಾಡುತ್ತಿದ್ದ. ಈ ಸಂಬಂಧ ಹೊಳೆನರಸಿಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.