ಹಾಸನ : ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ವಿಧಾನಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಭಾರಿ ಬಹುಮತದಿಂದ ಗೆಲುವಿನ ನಗೆ ಬೀರಿದ್ದಾರೆ.
Suraj Revanna wins council Election: ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸೂರಜ್ ರೇವಣ್ಣ ಸ್ಪರ್ಧಿಸಿದ್ದರು. ಇಂದು ಮತ ಎಣಿಕೆಯಲ್ಲಿ ಆರಂಭದಿಂದಲೂ ಕೊನೆಯವರೆಗೂ ಎಲ್ಲ ಟೇಬಲ್‌ಗಳಲ್ಲೂ ಡಾ.ಸೂರಜ್ ರೇವಣ್ಣ ಮುನ್ನಡೆ ಕಾಯ್ದುಕೊಂಡು ಬಂದರು. ಅಂತಿಮವಾಗಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಅಂದರೆ 1433 ಮತಗಳ ಅಂತರದಿಂದ ಸೂರಜ್ ರೇವಣ್ಣ ಗೆಲುವಿನ ನಗೆ ಬೀರಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಸಂಭ್ರಮಿಸುತ್ತಿದ್ದಾರೆ.
ಸೂರಜ್ ರೇವಣ್ಣ 2242 ಮತ ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಎನ್.ಶಂಕರ್ ಅವರನ್ನು ಸೋಲಿಸಿದ್ದಾರೆ. ಫಲಿತಾಂಶ ಇಂದು ಸಂಜೆ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಹೊರಬೀಳಲಿದೆ. ಎನ್. ಶಂಕರ್ 731 ಮತಗಳನ ಪಡೆದು 2ನೇ ಸಾನಕ್ಕಿಳಿದರೆ, ಬಿಜೆಪಿ ಅಭ್ಯರ್ಥಿ ವಿಶ್ವನಾಥ್ 354 ಮತಪಡೆದು ಹೀನಾಯ ಸೋಲು ಕಂಡಿದ್ದಾರೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಮೂರನೇ ಕುಡಿ ವಿಧಾನಸೌಧ ಪ್ರವೇಶಿಸಿದೆ.