ETV Bharat / state

ಶಿಕ್ಷಕರೇ ಸಮಾಜದ ಅಭಿವೃದ್ಧಿಗೆ ಕಾರಣ: ಸಚಿವ ಕೆ. ಗೋಪಾಲಯ್ಯ - hassan Minister K Gopalya

ಹಾಸನದ ಎಸ್.ಆರ್.ಎಸ್. ಪ್ರಜ್ಞಾ ಶಾಲೆಯಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾದಾಕೃಷ್ಣನ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಸಚಿವ ಕೆ. ಗೋಪಾಲಯ್ಯ ಉದ್ಘಾಟಿಸಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

hassan
ಡಾ. ಸರ್ವಪಲ್ಲಿ ರಾಧ ಕೃಷ್ಣನ್ ಅವರ ಜನ್ಮ ದಿನಾಚರಣೆ
author img

By

Published : Sep 5, 2020, 7:22 PM IST

ಹಾಸನ: ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ತಿದ್ದಿ ಬುದ್ಧಿ ಹೇಳಿ ಉತ್ತಮ ಮಾರ್ಗದರ್ಶನ ನೀಡಿ, ತಮ್ಮಲ್ಲಿರುವ ಜ್ಞಾನವನ್ನು ಧಾರೆ ಎರೆದು ವಿದ್ಯಾರ್ಥಿಗಳಿಗೆ ಉತ್ತಮ ಜೀವನವನ್ನು ರೂಪಿಸುವ ಶಿಕ್ಷಕರೇ ಸಮಾಜದ ಅಭಿವೃದ್ಧಿಗೆ ಕಾರಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಡಾ. ಸರ್ವಪಲ್ಲಿ ರಾಧ ಕೃಷ್ಣನ್ ಅವರ ಜನ್ಮ ದಿನಾಚರಣೆ

ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಗರದ ಎಸ್.ಆರ್.ಎಸ್. ಪ್ರಜ್ಞಾ ಶಾಲೆಯಲ್ಲಿ ಏರ್ಪಡಿಸಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶ್ರೇಷ್ಠ ಶಿಕ್ಷಣ ತಜ್ಞರು, ಆಧ್ಯಾತ್ಮಿಕ ಚಿಂತಕರು, ತತ್ವಜ್ಞಾನಿಗಳು ಹಾಗೂ ಉತ್ತಮ ಆಡಳಿತಗಾರರೂ ಆಗಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿ ಕಾರ್ಯ ನಿರ್ವಹಿಸಿದರು. ರಾಷ್ಟ್ರಪತಿಗಳ ಅವಧಿ ಮುಗಿದ ನಂತರ ಪ್ರಾಧ್ಯಾಪಕರಾಗಿ ಮುಂದುವರೆಯುವ ಮೂಲಕ ದೇಶಕ್ಕೆ ಉತ್ತಮ ಕೊಡುಗೆಯನ್ನು ನೀಡಿದ ಮಹಾನ್ ವ್ಯಕ್ತಿ ಎಂದು ಹೇಳಿದರು.

ಇಡೀ ರಾಜ್ಯದ ಎಲ್ಲ ಶಿಕ್ಷಕರ ಮೇಲೂ ಗೌರವವಿದೆ. ಸಮಾಜದ ಬದಲಾವಣೆಗೆ ಮುಖ್ಯ ಕಾರಣರಾದವರು ಶಿಕ್ಷಕರು, ಹಾಗಾಗಿ ಸರ್ಕಾರ ನಿಮ್ಮ ಪರವಾಗಿದೆ. ಶಿಕ್ಷಣಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಪರಿಹರಿಸುತ್ತೇನೆ ಎಂದು ಹೇಳಿದರು.

ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಒಂದು ಮಗುವನ್ನು ತಿದ್ದಿ ತೀಡಿ, ಜ್ಞಾನ ಕೊಟ್ಟು ಸಮಾಜಮುಖಿಯಾಗಿ ಯೋಚನೆ ಮಾಡುವಂತಹ ಬುದ್ಧಿಯನ್ನು ಕಲಿಸಿ, ಒಬ್ಬ ಪರಿಪೂರ್ಣ ವ್ಯಕ್ತಿಯನ್ನಾಗಿ ಮಾಡುವ ಎಲ್ಲಾ ಶಿಕ್ಷಕರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳನ್ನು ಅರ್ಪಿಸಿದರು.

ಒಂದು ಮಗು ತನ್ನ ಬಾಲ್ಯವನ್ನು ತಂದೆ ತಾಯಿಗಿಂತ ಹೆಚ್ಚಾಗಿ ಶಿಕ್ಷಕರ ಜೊತೆಯೇ ಕಳೆಯುತ್ತದೆ. ಹಾಗಾಗಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ಭಾವಿಸಿ ಸಹನೆಯಿಂದ ಮಕ್ಕಳ ಜ್ಞಾನವನ್ನು ವೃದ್ಧಿ ಮಾಡಲು ಶ್ರಮಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗಿದ್ದಾರೆ ಎಂದು ಶಾಸಕರು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.