ಹಾವೇರಿ: ತಾಂತ್ರಿಕ ದೋಷ ಹಿನ್ನೆಲೆ ನಡುರಸ್ತೆಯಲ್ಲೇ ಓಮ್ನಿ ಕಾರು ಹೊತ್ತಿ ಉರಿದಿರುವ ಘಟನೆ ರಟ್ಟಿಹಳ್ಳಿ ತಾಲೂಕಿನ ಸಣ್ಣಗುಬ್ಬಿ ಕ್ರಾಸ್ನಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಮಲೆಬೆನ್ನೂರಿನಿಂದ ನಾಲ್ವರು ಹಿರೇಕೆರೂರು ತಾಲೂಕಿನ ಸಾತೇನಹಳ್ಳಿಗೆ ದೇವಸ್ಥಾನಕ್ಕೆಂದು ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ.
ಬೆಂಕಿ ಕಾಣಸಿಕೊಳ್ಳುತ್ತಿದ್ದಂತೆಯೇ ನಾಲ್ವರು ವಾಹನದಿಂದ ಜಿಗಿದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.