ಅರಕಲಗೂಡು: ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ದೇವಾಲಯಗಳನ್ನು ಮುಚ್ಚಲಾಗಿತ್ತು. ನಾಳೆಯಿಂದ ರಾಜ್ಯದಲ್ಲಿ ದೇವಾಲಯಗಳು ಬಾಗಿಲು ತೆರೆಯಲು ಸರ್ಕಾರ ಅವಕಾಶ ನೀಡಿದ್ದರಿಂದ ಗ್ರಾಮ ದೇವತೆ ದೊಡ್ಡಮ್ಮ ದೇವಿ ದೇವಾಲಯದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.
ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ರಾಜ್ಯದಲ್ಲಿ ದೇವಾಲಯ, ಚರ್ಚ್, ಮಸೀದಿಗಳನ್ನು ಮುಚ್ಚಲಾಗಿತ್ತು. ಯುಗಾದಿ, ರಾಮನವಮಿ ಸೇರಿದಂತೆ ಯಾವ ಹಬ್ಬಕ್ಕೂ ದೇವಾಲಯಗಳಿಗೆ ಭಕ್ತರ ಪ್ರವೇಶ ಇರಲಿಲ್ಲ. ಇದರಿಂದ ಪಟ್ಟಣದ ಗ್ರಾಮ ದೇವತೆ ದೊಡ್ಡಮ್ಮ ದೇವಿ ದೇವಾಲಯವು ತೆರೆದಿರಲಿಲ್ಲ. ಈಗ ದೇವಾಲಯ ತೆರೆಯಲು ಸರ್ಕಾರ ಅನುಮತಿ ನೀಡಿದ್ದು, ಗ್ರಾಮ ದೇವತೆ ದೊಡ್ಡಮ್ಮ ದೇವಿ ದೇವಾಲಯವನ್ನು ನಾಳೆ ತೆರೆಯಲಾಗುತ್ತಿದೆ.
ದೇವಾಲಯ ತೆರೆಯುತ್ತಿರುವುದು ಸಂತೋಷದ ಸಂಗತಿಯಾಗಿದ್ದರೂ ಸಹ ಭಕ್ತಾದಿಗಳು ದೇವಾಲಯಕ್ಕೆ ಒಳಗೆ ಬರುವಾಗ ಮಾಸ್ಕ್ ಧರಿಸಿರಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಗ್ರಾಮದೇವತೆ ದೊಡ್ಡಮ್ಮ ದೇವಸ್ಥಾನದ ಅರ್ಚಕ ಮಂಜುನಾಥ ವಿನಂತಿಸಿಕೊಂಡಿದ್ದಾರೆ.