ಹಾಸನ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪುರಾತತ್ವ ಇಲಾಖೆಗೆ ಒಳಪಡುವ ಜಿಲ್ಲೆಯ ಎಲ್ಲಾ ದೇವಸ್ಥಾನಗಳನ್ನು ಇಂದಿನಿಂದ ಒಂದು ತಿಂಗಳ ಕಾಲ ಬಂದ್ ಮಾಡಬೇಕೆಂದು ಕೇಂದ್ರ ಪುರಾತತ್ವ ಇಲಾಖೆ ಆದೇಶ ಹೊರಡಿಸಿದೆ.

ಬೇಲೂರಿನ ಚೆನ್ನಕೇಶವ ದೇವಾಲಯ ಸೇರಿದಂತೆ ಹಾಸನ ಜಿಲ್ಲೆಯಲ್ಲಿ ಪುರಾತತ್ವ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನಗಳನ್ನು ಬಂದ್ ಮಾಡಲಾಗಿದೆ. ಪ್ರತಿನಿತ್ಯ ಎಲ್ಲ ದೇವಸ್ಥಾನಗಳಲ್ಲಿಯೂ ಎಂದಿನಂತೆ ಪೂಜಾ ಕೈಂಕರ್ಯಗಳು ನಡೆಯಲಿದ್ದು, ಏಪ್ರಿಲ್ 15ರಿಂದ ಮೇ 15ರ ತನಕ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ.
ಇದನ್ನೂಓದಿ: SSLC ಪರೀಕ್ಷೆ ನಡೆಸಬೇಕೆನ್ನುವ ಅಭಿಪ್ರಾಯ ಬರುತ್ತಿದೆ: ಸಚಿವ ಸುರೇಶ್ ಕುಮಾರ್