ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಗ್ರಾಮದಲ್ಲಿ ಹೊರ ರಾಜ್ಯದಿಂದ ಬಂದವರನ್ನು ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್ನಲ್ಲಿ ಇಡಲಾಗುತ್ತಿದೆ. ಇದಕ್ಕೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ತಹಶೀಲ್ದಾರ್ ಮಂಜುನಾಥ್ ಹಾಗೂ ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್, ಗ್ರಾಮಾಂತರ ಠಾಣೆ ಪಿಎಸ್ಐ ಚಂದ್ರಶೇಖರ್ ಸ್ಥಳಕ್ಕೆ ಬಂದು ಜನರನ್ನು ಸಮಾಧಾನ ಮಾಡಿದರು.
ಸದ್ಯ 18 ಜನರನ್ನು ಇಲ್ಲಿ ಕ್ವಾರಂಟೈನ್ ಇಡಲಾಗಿದ್ದು, ಇನ್ನೊಂದು ವಾರದಲ್ಲಿ ಗ್ರಾಮದ ಹೊರಗೆ ಇರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ಕ್ವಾರಂಟೈನ್ ಸ್ಥಳ ಸ್ಥಳಾಂತರಿಸಲಾಗುವುದು ಎಂದರು.