ETV Bharat / state

ಸಿದ್ದರಾಮಯ್ಯನವ್ರು ಕಾಂಗ್ರೆಸ್‌ ಪಕ್ಷದಲ್ಲಿದ್ದಾರೋ ಅಥವಾ ಬಿಜೆಪಿಯಲ್ಲಿದ್ದಾರೋ?: ಪ್ರೀತಂ ಗೌಡ ಪ್ರಶ್ನೆ - preetham j gowda latest news

ಬಿಜೆಪಿಯಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ, 2023ರವರೆಗೂ ಬಿ.ಎಸ್‌. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆಂದು ಶಾಸಕ ಪ್ರೀತಂ ಜೆ. ಗೌಡ ಸ್ಪಷ್ಟಪಡಿಸಿದರು. ಶಿರಾ ಮತ್ತು ಆರ್​​ಆರ್‌ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ಸೂರ್ಯ-ಚಂದ್ರ ಇರುವಷ್ಟು ಸತ್ಯ ಎಂದು ಭವಿಷ್ಯ ನುಡಿದರು.

Preetham J Gowda
ಸಿದ್ದರಾಮಯ್ಯನವ್ರು ಕಾಂಗ್ರೆಸ್‌ ಪಕ್ಷದಲ್ಲಿದ್ದಾರೋ ಅಥವಾ ಬಿಜೆಪಿಯಲ್ಲಿದ್ದಾರೋ?: ಪ್ರೀತಂ ಗೌಡ ಪ್ರಶ್ನೆ
author img

By

Published : Nov 5, 2020, 8:23 AM IST

Updated : Nov 5, 2020, 9:33 AM IST

ಹಾಸನ: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವ್ರು ಕಾಂಗ್ರೆಸ್‌ ಪಕ್ಷದಲ್ಲಿದ್ದಾರೋ ಅಥವಾ ಬಿಜೆಪಿಯಲ್ಲಿದ್ದಾರೋ ಎಂದು ಶಾಸಕ ಪ್ರೀತಂ ಗೌಡ ಪ್ರಶ್ನಿಸಿದ್ದಾರೆ. ಬಿಜೆಪಿ ಪಕ್ಷದ ಆಂತರಿಕ ವಿಷಯಗಳ ಬಗ್ಗೆ ಅವರು ಮಾತನಾಡುವುದಾದರೆ, ಮೊದಲು ಅವರು ಯಾವ ಪಕ್ಷದಲ್ಲಿದ್ದಾರೆ ಎಂಬುದನ್ನು ಖಚಿತಪಡಿಸಲಿ ಎಂದು ಶಾಸಕ ಪ್ರೀತಂ ಜೆ. ಗೌಡ ಒತ್ತಾಯಿಸಿದರು‌‌.

ಹಾಸನಾಂಬ ದೇವಾಲಯ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ. 2023ರವರೆಗೂ ಬಿ.ಎಸ್‌. ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರೆಯಲಿದ್ದಾರೆ. 2023ರ ಚುನಾವಣೆ ಯಡಿಯೂರಪ್ಪನವರ ನೇತೃತ್ವದಲ್ಲಿಯೇ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕ ಪ್ರೀತಂ ಜೆ ಗೌಡ ಪ್ರತಿಕ್ರಿಯೆ

ಇಷ್ಟು ವರ್ಷ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದವರು ಶಿರಾ ಕ್ಷೇತ್ರದ ಜನತೆಗೆ ಮಣ್ಣು ಎರಚಿ ಅಭಿವೃದ್ಧಿ ಕುಂಠಿತಗೊಳಿಸಿದ್ದರು. ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಪಕ್ಷ ಅಧಿಕಾರದಲ್ಲಿದ್ದು, ಈ ಬಾರಿ ನಮಗೆ ಅವಕಾಶ ಮಾಡಿಕೊಡಿ. ಅಭಿವೃದ್ಧಿ ಎಂದರೆ ಏನು ಎಂದು ತೋರಿಸುತ್ತೇವೆ ಎಂದು ಕ್ಷೇತ್ರದ ಜನತೆಯಲ್ಲಿ ಮನವಿ ಮಾಡಿದ್ದೆವು ಜಮತದಾರರು ಅದಕ್ಕೆ ಸಹಮತ ನೀಡಿದ್ದಾರೆ. ವಿಜಯೇಂದ್ರ ಅವರ ನೇತೃತ್ವದಲ್ಲಿ ಒಂದು ತಂಡವಾಗಿ ಕಾರ್ಯಕರ್ತರು ಮತ್ತು ಮುಖಂಡರು ಕೆಲಸ ಮಾಡಿದ್ದು, ನ. 10ರಂದು ಫಲಿತಾಂಶ ತಿಳಿಯಲಿದೆ ಎಂದರು.

ರಾಜರಾಜೇಶ್ವರಿ ನಗರದಲ್ಲಿ ಮುನಿರತ್ನ ಅವರು ಉತ್ತಮ ಪ್ರಚಾರ ಮಾಡಿದ್ದಾರೆ. ಜೊತೆಗೆ ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್‌ಗೌಡ ಅವರು ಈಗಾಗಲೇ ಗೆದ್ದಾಗಿದೆ. ಫಲಿತಾಂಶ ಪ್ರಕಟಿಸುವುದು ಮಾತ್ರ ಬಾಕಿ ಇದೆ. ಈಗಲೇ ಹೇಳಿದರೆ ಅತಿಶಯೋಕ್ತಿ ಎನಿಸಬಹುದು. ಆದರೆ, ಇದು ಸತ್ಯ ಎಂದು ಹೇಳಿದರು.

ಕಳೆದ ಬಾರಿಯ ಚುನಾವಣೆಯಲ್ಲಿ ಶಿರಾ ಕ್ಷೇತ್ರದಲ್ಲಿ ನಮ್ಮ ಪಕ್ಷ 18,000 ಮತಗಳನ್ನು ಪಡೆದಿತ್ತು. ಆದರೆ ಈ ಬಾರಿಯ ಉಪ ಚುನಾವಣೆಯಲ್ಲಿ 18,000ಕ್ಕಿಂತಲೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Last Updated : Nov 5, 2020, 9:33 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.