ಸಕಲೇಶಪುರ: ತಾಲೂಕಿನ ಉಚ್ಚಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಓರ್ವ ವ್ಯಕ್ತಿ ಸೇರಿದಂತೆ ಆತನ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ.
ತಾಲೂಕಿನ ಉಚ್ಚಂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲುಗತ್ತೂರು ಗ್ರಾಮದ 36 ವರ್ಷದ ಪುರುಷ ಹಾಗೂ ಆತನ 11 ವರ್ಷ ಹಾಗೂ 7 ವರ್ಷದ ಗಂಡು ಮಕ್ಕಳಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಆತನ ಹೆಂಡತಿಗೆ ಮೊದಲ ವರದಿಯಲ್ಲಿ ನೆಗೆಟಿವ್ ಬಂದಿದೆ.
ಸೋಂಕಿತರನ್ನು ಹಾಸನದ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಚಾಲಕ ವೃತ್ತಿ ನಿರ್ವಹಿಸುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಹಿಂತಿರುಗುವಾಗ ಹಾಸನದ ಆಸ್ಪತ್ರೆಯಲ್ಲಿ ಗಂಟಲು ದ್ರವವನ್ನು ಪರೀಕ್ಷೆಗೆ ನೀಡಿ ಮನೆಗೆ ಹಿಂತಿರುಗಿದ್ದರು. ಯಾರ ಸಂಪರ್ಕಕ್ಕೂ ಬರದಂತೆ ಎಚ್ಚರ ವಹಿಸಿದ್ದರಿಂದ ಗ್ರಾಮದಲ್ಲಿ ಹೆಚ್ಚಿನ ಆತಂಕ ಉಂಟಾಗಿಲ್ಲ.
ತಾಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹರೀಶ್, ತಾಲೂಕು ವೈದ್ಯಾಧಿಕಾರಿ ಮಹೇಶ್ ಸೇರಿದಂತೆ ಇತರರು ಆಗಮಿಸಿ ಮನೆಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದಾರೆ.