ಹಾಸನ: ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ, ಆಲೂರು ತಾಲೂಕಿನ ಕರಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮಶೇಖರ್ (35) ಮೃತ ಚಾಲಕ.
ಬುಧವಾರ ಸಂಜೆ ಕಣದಲ್ಲಿ ಒಕ್ಕಣೆ ಮಾಡಿದ್ದ ಭತ್ತದ ಹುಲ್ಲನ್ನು ತುಂಬಿಕೊಂಡು ಮನೆಗೆ ತೆರಳುವಾಗ, ಗ್ರಾಮದ ಸಮೀಪವಿರುವ ದೊಡ್ಡ ಕೆರೆ ಏರಿಯ ಮೇಲೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಚಾಲಕ ಸೋಮಶೇಖರ್ ಟ್ರ್ಯಾಕ್ಟರ್ ಕೆಳಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.