ಹಾಸನ: ಟಿವಿಎಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಗೌಡಗೆರೆ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.
ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿ ಹೋಬಳಿ ಬಡಮಾಕನಹಳ್ಳಿ ಗ್ರಾಮದ ನಿವಾಸಿ ಶಾಮಣ್ಣ (50) ಮೃತ ವ್ಯಕ್ತಿ. ದುರಸ್ತಿ ಕಾಮಗಾರಿ ನಡೆಯುತ್ತಿದ್ದ ರಸ್ತೆ ಭಾಗದಿಂದ ಚನ್ನರಾಯಪಟ್ಟಣ ಕಡೆ ತಿರುವು ಪಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಬಳಿಕ ಕಾರು ಚಾಲಕ ಪರಾರಿಯಾಗಿದ್ದು, ವಿಷಯ ಇಳಿದು ಸ್ಥಳಕ್ಕಾಗಮಿಸಿದ ಸಿಪಿಐ ಎಚ್.ಎನ್. ಕಾಂತರಾಜ್ ಹಾಗೂ ಸಂಚಾರಿ ಠಾಣೆ ಪಿಎಸ್‌ಐ ಬಬಿತಾ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.