ಹಾಸನ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಬ್ದಾಣೆ ಗ್ರಾಮದ ಬಳಿ ನಡೆದಿದೆ.
ಚಂದನ್ (18) ಸುನಿಲ್ (22) ಮೃತ ದುರ್ದೈವಿಗಳು. ಮಂಗಳವಾರ ಘಟನೆ ನಡೆದಿದ್ದು, ಗಾಯಾಳು ಯುವಕನನ್ನು ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಇದನ್ನೂ ಓದಿ : ಓದಿ : ಟಂಟಂ-ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಐವರ ಸಾವು
ಅಪಘಾತ ನಡೆದ ತಕ್ಷಣ ಕಾರಿನೊಂದಿಗೆ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಹಾಸನ ನಗರ ಠಾಣೆ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ.