ETV Bharat / state

ಹಬ್ಬಕ್ಕೆ ಹೋಗುತ್ತಿದ್ದಾಗ ಅಪಘಾತ: 2 ವರ್ಷದ ಮಗು ಸೇರಿ ಇಬ್ಬರ ಸಾವು, ಮತ್ತಿಬ್ಬರು ಗಂಭೀರ - hassan news

ಹಬ್ಬಕ್ಕೆಂದು ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಸ್ಥಳದಕ್ಕೇ ಸಾವಿಗೀಡಾದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ಜರುಗಿದೆ.

ಹಬ್ಬಕ್ಕೆ ಹೋಗುತ್ತಿದ್ದಾಗ ಅಪಘಾತ: 2 ವರ್ಷದ ಮಗು ಸೇರಿ ಇಬ್ಬರ ಸಾವು, ಮತ್ತಿಬ್ಬರು ಗಂಭೀರ

author img

By

Published : Sep 9, 2021, 11:05 PM IST

ಹಾಸನ: ಹಬ್ಬಕ್ಕೆಂದು ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮಗು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದು, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಈ ದಾರುಣ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ಚೈತ್ರ (2) ಮಧು (35) ಮೃತಪಟ್ಟವರು. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ನಿಲುವಾಗಿಲು ಬಳಿ ಈ ಕಾರು ಹಾಗೂ ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಚಿಕ್ಕಮಗಳೂರಿನಿಂದ ತನ್ನ ಮಾವ ಮಧು ಜೊತೆ ಹಬ್ಬಕ್ಕೆಂದು ಕುಟುಂಬ ಸಮೇತ ಖುಷಿ ಖುಷಿಯಾಗಿ ಕಾರಿನಲ್ಲಿ ಪಿರಿಯಾಪಟ್ಟಣಕ್ಕೆ ತೆರಳುತ್ತಿದ್ದ ಮಗು ಕೂಡ ಸಾವಿಗೀಡಾಗಿದ್ದು, ಸ್ಥಳದಲ್ಲಿ ಜಮಾಯಿಸಿದ್ದವರ ಕಣ್ಣು ಈ ದೃಶ್ಯ ನೋಡಿ ಒದ್ದೆಯಾಗಿದ್ದವು.

ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಕೊಣನೂರಿನ ಆಸ್ಪತ್ರೆದೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಕೊಣನೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಈ ಸಂಬಂಧ ಕೊಣನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.