ಹಾಸನ : ದ್ವಿಚಕ್ರ ವಾಹನಕ್ಕೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.
ಕಲ್ಲೇಶ್ (21) ಮತ್ತು ಸಂಪತ್ (23) ಅಪಘಾತದಲ್ಲಿ ಮೃತಪಟ್ಟವರು. ಅರಸೀಕೆರೆಯ ರಾಷ್ಟ್ರೀಯ ಹೆದ್ದಾರಿ 206 ರ ಟಿ ಎಚ್ ರಸ್ತೆಯ ಕೋಡಿಹಳ್ಳಿ ಸಮೀಪ ಘಟನೆ ನಡೆದಿದೆ. ಕಲ್ಲೇಶ್ ತಾಲೂಕಿನ ಸಂಕೋಡನಹಳ್ಳಿ ಮತ್ತು ಸಂಪತ್ ಬೇಲೂರು ತಾಲೂಕಿನ ಮದಗಟ್ಟ ಗ್ರಾಮದವರು ಎನ್ನಲಾಗಿದೆ.
ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಹಾಗು ವಾಹನದ ಬೆಳಕಿನ ಸಮಸ್ಯೆಯಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಅರಸೀಕೆರೆ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದ್ದು, ಅಸಿಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.