ಅರಕಲಗೂಡು: ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಾಸನ ರಸ್ತೆಯಲ್ಲಿ ನಡೆದಿದೆ.
ಪಟ್ಟಣದ ಹೊರವಲಯದ ಶಂಭುನಾಥಪುರ ಗ್ರಾಮದ ವಿನೋದ (21) ಮತ್ತು ಜಗದೀಶ್ (23) ಮೃತರಾದವರು. ಸ್ಥಳಕ್ಕೆ ಅರಕಲಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.