ETV Bharat / state

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು: ಡಿವೈಎಸ್ಪಿ ಲಕ್ಷ್ಮೇಗೌಡ - ಚನ್ನರಾಯಪಟ್ಟಣದ ಸಿಪಿಐ ಕುಮಾರ್ ಮತ್ತು ಪಿಎಸ್ಐ ಕಿರಣ್ ಕುಮಾರ್

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ. ಸ್ವಚ್ಚತೆ ಕಾಪಾಡಿ ಕೊರೊನಾ ಓಡಿಸಿ ಎಂಬ ಹೆಸರಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಜಾಗೃತಿ ಮೂಡಿಸಲಾಯಿತು.

dysp-lakshmegowda
ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಕಾರ್ಯ
author img

By

Published : Mar 18, 2020, 4:30 AM IST

ಹಾಸನ: ದ್ವಿಚಕ್ರ ವಾಹನ ಸವಾರರು ಇಂದಿನಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇಲ್ಲದಿದ್ದರೆ ವಾಹನ ಚಾಲನಾ ಪರವಾನಿಗೆಯನ್ನು ರದ್ದು ಮಾಡಲಾಗುವುದು ಎಂದು ಡಿವೈಎಸ್ಪಿ ಬಿ.ಬಿ.ಲಕ್ಷ್ಮೇಗೌಡ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ.

ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಕಾರ್ಯ

ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ. ಸ್ವಚ್ಚತೆ ಕಾಪಾಡಿ ಕೊರೊನಾ ಓಡಿಸಿ ಎಂಬ ಹೆಸರಲ್ಲಿ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಕಾರ್ಯ ಮಾಡಿ ಬಳಿಕ ಮಾತನಾಡಿದ್ರು. ಹೊಳೆನರಸೀಪುರ ವೃತ್ತದ ವ್ಯಾಪ್ತಿಯಲ್ಲಿ ಬರುವ ಹೊಳೆನರಸೀಪುರ, ಅರಕಲಗೂಡು, ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ ಕಳೆದ ಎರಡೂವರೆ ತಿಂಗಳಲ್ಲಿ ಸಂಭವಿಸಿದ ಅಪಘಾತದಲ್ಲಿ 25 ದ್ವಿಚಕ್ರ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ. ಇವರೆಲ್ಲರು ಹೆಲ್ಮೆಟ್ ಧರಿಸಿದ್ದರೆ ಪ್ರಾಣ ಹಾನಿಯಾಗುತ್ತಿರಲಿಲ್ಲ. ಹಾಗಾಗಿ ಇಂದಿನಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವುದರ ಜೊತೆಗೆ ಸೀಟ್ ಬೆಲ್ಟ್ ಧರಿಸಿ ವಾಹನ ಚಾಲನೆ ಮಾಡಬೇಕು ಎಂದು ವಿನಂತಿ ಮಾಡಿದ್ರು.

ಇನ್ನು ಚನ್ನರಾಯಪಟ್ಟಣದ ಸಿಪಿಐ ಕುಮಾರ್ ಮತ್ತು ಪಿಎಸ್ಐ ಕಿರಣ್ ಕುಮಾರ್ ಹೆಲ್ಮೆಟ್ ಧರಿಸದಿದ್ದರೆ ಯಮಧರ್ಮರಾಜ ನಿಮ್ಮತ್ರ ಬರ್ತಾರೆ ಎಂಬಂತೆ ಯಮನ ವೇಷವನ್ನ ತೊಡಿಸಿ ನಗರದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.