ETV Bharat / state

ಹಾಸನ: ಜಿಲ್ಲಾ ಪಂಚಾಯಿತಿ 5 ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

ಜಿಲ್ಲಾ ಪಂಚಾಯಿತಿ ಐದು ಸ್ಥಾಯಿ ಸಮಿತಿಗಳಿಗೆ ಜಿಪಂ ಹೊಯ್ಸಳ ಸಭಾಂಗಣದಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವುದನ್ನು, ಚುನಾವಣಾಧಿಕಾರಿ ನಾಗ್‌ರಾಜ್ ಪ್ರಕಟಿಸಿದರು.

ಜಿಲ್ಲಾ ಪಂಚಾಯಿತಿ 5 ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

author img

By

Published : Sep 8, 2020, 7:21 PM IST

ಹಾಸನ: ಜಿಲ್ಲಾ ಪಂಚಾಯಿತಿ ಐದು ಸ್ಥಾಯಿ ಸಮಿತಿಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ.

ಜಿಲ್ಲಾ ಪಂಚಾಯಿತಿ 5 ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ
ಜಿಲ್ಲಾ ಪಂಚಾಯಿತಿ 5 ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

ಜಿಪಂ ಹೊಯ್ಸಳ ಸಭಾಂಗಣದಲ್ಲಿ ನಡೆದ ಸ್ಥಾಯಿ ಸಮಿತಿಗಳ ಚುನಾವಣೆಯಲ್ಲಿ ಸದಸ್ಯರು ನಾಮಪತ್ರ ಸಲ್ಲಿಸಿದ ನಂತರ, ಪರಿಶೀಲನೆ ನಡೆಸಿದ ಜಿಪಂ ಮುಖ್ಯ ಯೋಜನಾಧಿಕಾರಿ ಹಾಗೂ ಚುನಾವಣಾಧಿಕಾರಿ ನಾಗ್‌ರಾಜ್ ಅವಿರೋಧ ಆಯ್ಕೆ ಪ್ರಕಟಿಸಿದರು.

ಹಣಕಾಸು ಲೆಕ್ಕಪರಿಶೋಧನೆ ಮತ್ತು ಯೋಜನಾ ಸ್ಥಾಯಿ ಸಮಿತಿಯ ಅಧ್ಯಕ್ಷೆ ಶ್ವೇತಾ ದೇವರಾಜ್ ಆಯ್ಕೆಯಾಗಿದ್ದು, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಪಿ. ಸ್ವರೂಪ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಬಿಳಿ ಚೌಡಯ್ಯ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶಾರದಮ್ಮ ಶಿವಣ್ಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಾಗ್‌ರಾಜ್ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರಜ್ವಲ್ ರೇವಣ್ಣ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ವೇತಾ ದೇವರಾಜ್, ಶಾಸಕ ಹೆಚ್.ಡಿ. ರೇವಣ್ಣ, ಕೆ.ಎಂ. ಶಿವಲಿಂಗೇಗೌಡ, ಹೆಚ್.ಕೆ. ಕುಮಾರಸ್ವಾಮಿ, ಆಡಳಿತ ಉಪ ಕಾರ್ಯದರ್ಶಿ ಚಂದ್ರಶೇಖರ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.