ETV Bharat / state

ಗೃಹ ರಕ್ಷಕ ದಳ ಸಿಬ್ಬಂದಿಗೆ ಅಪರಿಚಿತ ವಾಹನ ಡಿಕ್ಕಿ: ಗಂಭೀರ ಗಾಯ

author img

By

Published : May 31, 2020, 11:22 PM IST

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೃಹ ರಕ್ಷಕ ದಳ ಸಿಬ್ಬಂದಿಯೋರ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮೆಹಬೂಬ್ ಖಾನ್ (40) ಗಾಯಗೊಂಡಿರುವ ಗೃಹ ರಕ್ಷಕ ದಳದ ಸಿಬ್ಬಂದಿಯಾಗಿದ್ದಾರೆ.

Home Guard Staff
ಮೆಹಬೂಬ್ ಖಾನ್ (40) ಗಾಯಗೊಂಡಿರುವವರು

ಸಕಲೇಶಪುರ: ಕೊರೊನಾ ವಾರಿಯರ್​ ಆಗಿ ಸೇವೆ ಸಲ್ಲಿಸುತ್ತಿದ್ದ ಗೃಹ ರಕ್ಷಕ ದಳದ ಸಿಬ್ಬಂದಿಯೋರ್ವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಜೆ ನಡೆದಿದೆ.

ಮೆಹಬೂಬ್ ಖಾನ್ (40) ಗಾಯಗೊಂಡವರು. ತಾಲೂಕಿನ ಬ್ಯಾಕರವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ಸ್ಕೂಲ್​ನಲ್ಲಿ ಕ್ವಾರಂಟೈನ್ ಕರ್ತವ್ಯವನ್ನು ಮುಗಿಸಿಕೊಂಡು ಸಂಜೆ 6.30ರ ವೇಳೆಗೆ ಪಟ್ಟಣದ ಕುಶಾಲನಗರ ಬಡಾವಣೆಯಲ್ಲಿರುವ ಮನೆಗೆ ಹೋಗಲು ಹಿಂತಿರುಗವಾಗ ಕೆಸಗಾನಹಳ್ಳಿ ಹತ್ತಿರ ಅಪರಿಚಿತ ಕಾರು ಇವರ ಬೈಕಿಗೆ ಡಿಕ್ಕಿ ಹೊಡೆದು ನಿಲ್ಲಿಸದೇ ಹೋಗಿದೆ. ಗಾಯಾಳುವಿನ ಬಲಗಾಲಿನ ಮೂಳೆ ಮುರಿದಿರುವುದಲ್ಲದೆ ತೀವ್ರ ಪೆಟ್ಟು ಬಿದ್ದಿದ್ದ, ಹಿನ್ನೆಲೆಯಲ್ಲಿ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಗೆ ಕರೆದುಕೊಂಡು ಬಂದು ಪ್ರಾಥಮಿಕವಾಗಿ ಚಿಕಿತ್ಸೆ ನೀಡಿದ ನಂತರ ಹೆಚ್ಚಿನ ಚಿಕಿತ್ಸೆಗೆ ಹಾಸನದ ಜನಪ್ರಿಯ ಆಸ್ಪತ್ರೆಯ ICU ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಎಸ್​ಪಿ ಶ್ರೀನಿವಾಸ್ ಗೌಡ, ಹೆಚ್ಚುವರಿ ಎಸ್​ಪಿ ನಂದಿನಿ, ಡಿವೈಎಸ್​ಪಿ ಗೋಪಿ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ನಗರ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿದ್ದು, ಈತನ ಚಿಕಿತ್ಸೆಗೆ ಸರ್ಕಾರ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.