ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕಾಟೀಹಳ್ಳಿಯಲ್ಲಿ ನಡೆದಿದೆ.
ವೈರಮುಡಿಗೌಡ (74) ಮೃತ ವೃದ್ಧ ಎಂದು ಗುರುತಿಸಲಾಗಿದೆ. ಹಾಲು ತರಲು ಮನೆಯಿಂದ ಹೊರ ಬಂದ ವೃದ್ಧ, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ವಾಹನ ಚಾಲಕನೋರ್ವ ವೇಗದಲ್ಲಿ ಬಂದು ಆತನಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ವೃದ್ಧ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ.
ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು, ಅಪಘಾತದ ಬಗ್ಗೆ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.