ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಯುವಕನೋರ್ವ ರೈಲಿಗೆ ತಲೆಕೊಟ್ಟು ಬಾರದಲೋಕಕ್ಕೆ ತೆರಳಿದ್ದಾನೆ.
ಮಂಗಳೂರಿನಿಂದ ಸೋಲಾಪುರಕ್ಕೆ ಹೊರಟಿದ್ದ ರೈಲಿಗೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದಂತೆ ಕಂಡುಬಂದ ಅಪರಿಚತ ಯುವಕನೋರ್ವ ಏಕಾಏಕಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕನ ರುಂಡ ಮತ್ತು ಮುಂಡ ಬೇರೆ ಬೇರೆಯಾಗಿವೆ.
ಇನ್ನು, ಆತ್ಮಹತ್ಯೆಗೆ ಶರಣಾಗಿರುವ ಯುವಕನ ಗುರುತು ಪತ್ತೆಯಾಗಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೆರಡು ದಿನ ಮೃತದೇಹವನ್ನು ಶವಾಗಾರದಲ್ಲಿ ಇಡಲಾಗುವುದು ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.