ETV Bharat / state

ಸುಭದ್ರ  ಪ್ರಜಾಪ್ರಭುತ್ವಕ್ಕೆ ಮತದಾನ ಅತ್ಯಗತ್ಯ: ತಹಸೀಲ್ದಾರ್​ ಪ್ರತಿಪಾದನೆ - ಸುಭದ್ರ ಪ್ರಜಾಪ್ರಭುತ್ವ ಸಾಧಿಸಲು ಮತದಾನ ಅಗತ್ಯ

ಹಾಸನ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಭಾರತೀಯ ಚುನಾವಣಾ ಆಯೋಗ, ತಹಸೀಲ್ದಾರ್ ಅವರ ಕಾರ್ಯಾಲಯದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

voters-day-celebration-in-hassan
ಸುಭದ್ರವಾಗಿ ಪ್ರಜಾಪ್ರಭುತ್ವ ಸಾಧಿಸಲು ಮತದಾನ ಅಗತ್ಯ
author img

By

Published : Jan 25, 2020, 11:57 PM IST

ಹಾಸನ : ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ಹೊಂದಲು 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ಮತದಾನದ ಹಕ್ಕು ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಶಿರೀನ್ ತಾಜ್ ಕರೆ ನೀಡಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಭಾರತೀಯ ಚುನಾವಣಾ ಆಯೋಗ, ತಹಸೀಲ್ದಾರ್ ಅವರ ಕಾರ್ಯಾಲಯದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮತ ಮೌಲ್ಯವು ಅತ್ಯಮೂಲ್ಯವಾದದ್ದು. ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದು ಕರೆ ನೀಡಿದರು.

ಸುಭದ್ರವಾಗಿ ಪ್ರಜಾಪ್ರಭುತ್ವ ಸಾಧಿಸಲು ಮತದಾನ ಅಗತ್ಯ

ದೇಶವನ್ನು ಅಭಿವೃದ್ಧಿಪಡಿಸುವ ಮತ್ತು ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಯುವ ಮತದಾರರಿಗೆ ಇದೆ. ಯಾವ ವ್ಯಕ್ತಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೋ ಆ ವ್ಯಕ್ತಿ ಆ ದೇಶದ ನಾಗರಿಕರಾಗಿರುತ್ತಾರೆ. ಭಾರತದಲ್ಲಿ ಶೇ.65 ರಷ್ಟು ಮತದಾನ ನಡೆಯುತ್ತಿದೆ. ಮತದಾನದ ಪ್ರಮಾಣ ಕಡಿಮೆಯಾಗಲು ಯುವ ಮತದಾರ ನಿರಾಸಕ್ತಿ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ರು.

ಮತದಾನದ ಬಗ್ಗೆ ಜಾಗೃತಿ ಅರಿವು ಮೂಡಿಸಲು ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನಡೆಸುವುದರ ಜೊತೆಗೆ ಪ್ರತಿಜ್ಞಾ ವಿಧಿ ಸಹ ಭೋದಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿರಿನ್​ ತಾಜ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ಸೇರಿದಂತೆ ಪದವಿ ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Intro:ಆಲೂರು : ಸುಭದ್ರ ಪ್ರಜಾಪ್ರಭುತ್ವ ರಾಷ್ಟ್ರ ಹೊಂದಲು 18 ವರ್ಷ ತುಂಬಿದ ಪ್ರತಿಯೊಬ್ಬ ಭಾರತೀಯ ವ್ಯಕ್ತಿಯು ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಶಿರೀನ್ ತಾಜ್ ತಿಳಿಸಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಭಾರತೀಯ ಚುನಾವಣಾ ಆಯೋಗ, ತಹಸೀಲ್ದಾರ್ ರವರ ಕಾರ್ಯಾಲಯದ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮತ ಮೌಲ್ಯವು ಅತ್ಯಮೂಲ್ಯವಾದದ್ದು. 18 ವರ್ಷ ಪೂರೈಸಿದ ಪ್ರತಿಯೊಬ್ಬ ಭಾರತೀಯರು ಕಡ್ಡಾಯವಾಗಿ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿ ಮತದಾನದ ಹಕ್ಕನ್ನು ಪಡೆದುಕೊಳ್ಳಬೇಕು ಮತ್ತು ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕು ಎಂದ್ರು.

ದೇಶವನ್ನು ಅಭಿವೃದ್ಧಿಪಡಿಸುವ ಮತ್ತು ವ್ಯವಸ್ಥೆಯನ್ನು ಬದಲಾಯಿಸುವ ಶಕ್ತಿ ಯುವ ಮತದಾರರಿಗೆ ಇದೆ. ಯಾವ ವ್ಯಕ್ತಿ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೋ ಆ ವ್ಯಕ್ತಿ ಆ ದೇಶದ ನಾಗರಿಕರಾಗಿರುತ್ತಾರೆ. ಭಾರತದಲ್ಲಿ ಶೇ.65 ರಷ್ಟು ಮತದಾನ ನಡೆಯುತ್ತಿದೆ. ಮತದಾನದ ಪ್ರಮಾಣ ಕಡಿಮೆಯಾಗಲು ಯುವ ಮತದಾರ ನಿರಾಸಕ್ತಿ ಕಾರಣವಾಗಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶಿವಪ್ರಸಾದ್ ಬೇಸರ ವ್ಯಕ್ತಪಡಿಸಿದ್ರು.

ಮತದಾನದ ಬಗ್ಗೆ ಜಾಗೃತಿ ಅರಿವು ಮೂಡಿಸಲು ಪಟ್ಟಣದ ಪ್ರಮುಖ ರಸ್ತೆಯಲ್ಲಿ ವಿದ್ಯಾರ್ಥಿಗಳಿಂದ ಜಾಥಾ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿರೀನ್ ತಾಜ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸತೀಶ್ ,ಬಿ ಆರ್ ಸಿ ರಮೇಶ್,ಸಿಡಿಪಿಒ ಎ.ಟಿ.ಮಲ್ಲೇಶ್, ಸಮಾಜ ಕಲ್ಯಾಣಾಧಿಕಾರಿ ಪುಂಡಲಿಕ, ಸೇರಿದಂತೆ ಪದವಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.