ಹಾಸನ: 'ಸದಾ ನಿಮ್ಮ ಜೊತೆಯಲ್ಲೇ ಇರುತ್ತೇವೆ. ಯಾರು ಕೂಡ ಆತಂಕಪಡುವ ಅವಶ್ಯಕತೆ ಇಲ್ಲ. ನಾವೆಲ್ಲಾ ಒಂದೇ ಕುಟುಂಬದವರು. ನಿಮ್ಮ ಎಲ್ಲಾ ಕಷ್ಟಗಳಿಗೂ ಜೊತೆಯಾಗಿರುತ್ತೇವೆ' ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಹಾಸನದ ಕೆಎಸ್ಆರ್ಪಿ ಮತ್ತು ಸಿವಿಲ್ ಪೊಲೀಸರಿಗೆ ಧೈರ್ಯ ತುಂಬಿದರು.
ಇಲ್ಲಿನ ಪೊಲೀಸರಿಗೆ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದು ಹಾಸನಕ್ಕೆ ಬಂದು ಕೆಎಸ್ಆರ್ಪಿ ಕ್ಯಾಂಪಸ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬಿದರು.
ಸಿಬ್ಬಂದಿಗೆ ಸೋಂಕು ತಗುಲಿರುವುದು ಬೇಸರದ ಸಂಗತಿ. ನಿಮ್ಮೊಂದಿಗೆ ನಾನಿರುತ್ತೇನೆ. ನಿಮ್ಮ ಎಲ್ಲಾ ಕಷ್ಟಗಳಿಗೆ ಸ್ಪಂದಿಸುವ ಜೊತೆಗೆ ಸರ್ಕಾರದಿಂದ ಮತ್ತಷ್ಟು ಸೌಲಭ್ಯ ನೀಡುವಂತೆ ಮನವಿ ಮಾಡುತ್ತೇನೆ ಎಂದು ಕ್ವಾರಂಟೈನ್ನಲ್ಲಿರುವ ಪೊಲೀಸ್ ಸಿಬ್ಬಂದಿಗೆ ಮತ್ತು ಅಧಿಕಾರಿಗಳಿಗೆ ಭರವಸೆ ನೀಡಿದರು.