ETV Bharat / state

ನಿರ್ಲಕ್ಷಿತ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ; ಕೆ.ಗೋಪಾಲಯ್ಯ ಎಚ್ಚರಿಕೆ - NH repair work news

ಹಾಸನದಲ್ಲಿ ರಸ್ತೆ ಗುಂಡಿ ಮುಚ್ಚುವ ಕೆಲಸದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಏನಾದರೂ ಸಮಸ್ಯೆಯಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

We will filed criminal case against neglected officers; Minister K Gopalaiah
ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಚಿವ ಕೆ.ಗೋಪಾಲಯ್ಯ.
author img

By

Published : Nov 26, 2020, 8:52 PM IST

ಹಾಸನ: ಮಾರನಹಳ್ಳಿಯಿಂದ ಹಾಸನ ವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಗುಂಡಿ ಮುಚ್ಚುವ ಕೆಲಸವನ್ನು ವಾರದಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದ್ದರೂ ಯಾವುದೇ ಪ್ರಗತಿಯಾಗಿಲ್ಲ. ರಸ್ತೆ ಅಪಘಾತವೇನಾದರೂ ಸಂಭವಿಸಿದರೆ ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎಂಜಿನಿಯರ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದೇನೆ ಎಂದು ಸಚಿವ ಕೆ.ಗೋಪಾಲಯ್ಯ ಹೇಳಿದರು.

ಇದನ್ನೂ ಓದಿ: ಬಿಎಸ್​ವೈ ಕೊಟ್ಟ ಮಾತು ಮುರಿಯದ ಸಿಎಂ; ಸಚಿವ ಸ್ಥಾನಕ್ಕೆ ಗ್ಯಾರಂಟಿ ನೀಡಿದ ಗೋಪಾಲಯ್ಯ

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಗುಂಡಿ ಮುಚ್ಚುವ ಕಾರ್ಯ ಪ್ರಾರಂಭವಾಗಿ ಸಾಕಷ್ಟು ದಿನಗಳೇ ಕಳೆದರೂ ಪೂರ್ಣಗೊಂಡಿಲ್ಲ. ನಿಧಾನಗತಿಯ ಕಾಮಗಾರಿಗೆ ಏನು ಕಾರಣ ಎಂಬುದು ತಿಳಿದುಬರುತ್ತಿಲ್ಲ. ಡಿ.6ಕ್ಕೆ ಸಕಲೇಶಪುರದಲ್ಲಿ ಅಧಿಕಾರಿಗಳ ಸಭೆ ಏರ್ಪಡಿಸಿದ್ದು ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿರುವ ಸಚಿವ ಕೆ.ಗೋಪಾಲಯ್ಯ.

ಚನ್ನರಾಯಪಟ್ಟಣದ ಪಿಎಸ್​ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣ ತನಿಖೆ ಪೂರ್ಣಗೊಂಡಿದ್ದು, ಇಲಾಖೆಯ ಹಿರಿಯ ಅಧಿಕಾರಿಗಳಿಂದಲೇ ಮಾಹಿತಿ ಕೊಡಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಸಚಿವರ ಕಣ್ಣೆದುರೇ ಕೈ ಕೈ ಮಿಲಾಯಿಸಿದ ಬಿಜೆಪಿ ಕಾರ್ಯಕರ್ತರು..!

ಕಾಡಾನೆ ಹಾವಳಿ, ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಲಾಗುವುದು. ಹಾಸನ ತಾಲೂಕಿನ ದೊಡ್ಡಗದ್ದವಳ್ಳಿ ಮಹಾಲಕ್ಷ್ಮಿ ದೇವಾಲಯದ ಮಹಾಕಾಳಿ ವಿಗ್ರಹ ಭಗ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗೆ ಆ ದಿನವೇ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ನಿಧಿ ಆಸೆಗಾಗಿ ದುಷ್ಕರ್ಮಿಗಳು ವಿಗ್ರಹ ನಾಶಗೊಳಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ನಾನು ಶನಿವಾರ ಅಲ್ಲಿಗೆ ಭೇಟಿ ನೀಡುತ್ತಿದ್ದು, ತನಿಖೆ ಬಳಿಕ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.