ಹಾಸನ: ನಾಳೆ ಸುಪ್ರಸಿದ್ದ ಸಕಲೇಶ್ವರ ಜಾತ್ರಾ ಮಹೋತ್ಸವ ನಡೆಯಲಿದ್ದು, ರಾಷ್ಟ್ರೀಯ ಹೆದ್ದಾರಿ ಬೆಂಗಳೂರು-ಮಂಗಳೂರು ನಡುವೆ ಸಂಚಾರದಲ್ಲಿ ವ್ಯತ್ಯಯವಾಗಬಹುದು. ಹೀಗಾಗಿ ಜಿಲ್ಲಾಡಳಿತ ಬದಲಿ ಮಾರ್ಗ ಕಲ್ಪಿಸಿದೆ.
ಪ್ರತಿವರ್ಷದಂತೆ ಈ ವರ್ಷವೂ ಸಕಲೇಶಪುರದಲ್ಲಿ ನಡೆಯುವ ಸಕಲೇಶ್ವರ ಸ್ವಾಮಿಯ ದಿವ್ಯ ರಥೋತ್ಸವ, ದೇವಾಲಯ ವೃತ್ತದಿಂದ ಪುರಸಭೆವರೆಗೆ ಸಾಗಲಿದ್ದು, ಈ ಸಮಯದಲ್ಲಿ ಸುಮಾರು ಹತ್ತರಿಂದ ಹದಿನೈದು ಸಾವಿರ ಭಕ್ತಾದಿಗಳು ಸೇರುವ ನಿರೀಕ್ಷೆಯಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿ 75 ಹಾಸನ-ಮಂಗಳೂರು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಬಹುದು. ಆದ್ದರಿಂದ ಫೆಬ್ರವರಿ 28 ರಂದು ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಸಕಲೇಶಪುರ ನಗರದಲ್ಲಿ ಹಾದುಹೋಗುವ ವಾಹನಗಳಿಗೆ ಬದಲಿ ವ್ಯವಸ್ಥೆಯನ್ನು ಜಿಲ್ಲಾಡಳಿತ ಕಲ್ಪಿಸಿದೆ. ಕೆಎಸ್ಆರ್ಟಿಸಿ ಹೊರತುಪಡಿಸಿ ಉಳಿದೆಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ.
![Weekend travelers visiting Hassan district are alert: The road bundh tomorrow in Sakleshpur](https://etvbharatimages.akamaized.net/etvbharat/prod-images/kn-hsn-05-road-bund-av-7203289-photo_27022021205521_2702f_1614439521_952.jpg)
ಮಾರ್ಗ ಸೂಚಿ ನೋಡುವುದಾದ್ರೆ :
- ಮಂಗಳೂರಿನಿಂದ ಹಾಸನಕ್ಕೆ ಸಂಚರಿಸುವ ಲಘು ವಾಹನಗಳು ಸಕಲೇಶಪುರ ನಗರದ ಪಶು ಚಿಕಿತ್ಸಾಲಯದ ಕಡೆಯಿಂದ ಹಳೆ ಸಂತೆವೇರಿ ರಸ್ತೆಯಲ್ಲಿ ಪ್ರವೇಶಿಸಿ ಆಜಾದ್ ರಸ್ತೆಯ ಮೂಲಕ ರಾಷ್ಟ್ರೀಯ ಹೆದ್ದಾರಿಯ ಮೂಲಕ ಹಾದು ಹೋಗಬೇಕು.
- ಹಾಸನದಿಂದ ಬರುವ ವಾಹನಗಳು ಬಸವೇಶ್ವರ ರಸ್ತೆಯ ಮೂಲಕ ಕಾಸ್ಮೋಪಾಲಿಟನ್ ಕ್ಲಬ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 75 ಪ್ರವೇಶಿಸುವುದು.
- ಮಂಗಳೂರಿನಿಂದ ಹಾಸನಕ್ಕೆ ಸಂಚರಿಸುವ ವಿವಿಧ ಮಾದರಿಯ ಟ್ರಕ್ ಟ್ಯಾಂಕರ್ ಇತರೆ ಭಾರಿ ವಾಹನಗಳು ಮಾರನಹಳ್ಳಿ ಬಳಿ ನಿಲುಗಡೆ ಮಾಡಲು ಸೂಚನೆ.
- ಹಾಸನದ ಕಡೆಯಿಂದ ಬರುವ ವಾಹನಗಳನ್ನು ಪೇಟೆಯ ಬಳಿ ನಿಲುಗಡೆ ಮಾಡಲು ಸೂಚನೆ.
- ಪರಿಸ್ಥಿತಿಯನ್ನು ಅವಲೋಕಿಸಿ ಭಾರಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು