ಹಾಸನ: ಕೆಂಡ ಹಾಯುವಾಗ ಬೆಂಕಿಗೆ ಬಿದ್ದ ಹಿನ್ನೆಲೆ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಳಮೆ ಗ್ರಾಮದಲ್ಲಿ ನಡೆದಿದೆ.
ಚಾಂದಿನಿ ಕೊಂಡ ಹಾಯುವಾಗ ಕಾಲು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡ ಮಹಿಳೆ. ದೇವಿರಮ್ಮ ಸುಗ್ಗಿ ಜಾತ್ರಾಮಹೋತ್ಸವ ಬಳಿಕ ರಾತ್ರಿ ಕೆಂಡೋತ್ಸವವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ಸಾಕಷ್ಟು ಮಂದಿ ಕೆಂಡೋತ್ಸವದಲ್ಲಿ ಭಾಗಿಯಾಗಿ ಯಶಸ್ವಿಯಾದರೆ, ಚಾಂದಿನಿ ಎಂಬ ಮಹಿಳೆ ಮಾತ್ರ ಕ್ಷಣ ಮಾತ್ರದಲ್ಲಿ ಕಾಲು ಜಾರಿ ಕೆಂಡದ ಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚಾಂದಿನಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.