ETV Bharat / state

ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ : ಗಂಡನ ಮೇಲೆ ಗುಮಾನಿ - Puttana Hosahalli village of Arakalagudu Taluk

ಸಾಕಮ್ಮ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಪ್ರವೀಣ್ ಮತ್ತು ಮಾವ ರಂಗಸ್ವಾಮಿ ನಾಪತ್ತೆಯಾಗಿದ್ದು, ಸಾಕಮ್ಮನ ಮೃತದೇಹವನ್ನ ಪೋಷಕರು ಗಂಡನ ಮನೆಯ ಮುಂದೆ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ..

Woman's dead body found in hanging condition in Hassan
ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಗಂಡನ ಮೇಲೆ ಗುಮಾನಿ
author img

By

Published : Dec 19, 2020, 11:54 AM IST

ಹಾಸನ : ಮಹಿಳೆಯೊಬ್ಬಳು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಪುಟ್ಟನಹೊಸಹಳ್ಳಿ ಗ್ರಾಮದ ಸಾಕಮ್ಮ(24) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ನಿನ್ನೆ ರಾತ್ರಿ ತಮ್ಮ ಜಮೀನಿನ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಾಕಮ್ಮಳ ಮೃತದೇಹ ಪತ್ತೆಯಾಗಿದೆ.

2 ವರ್ಷಗಳ ಹಿಂದೆ ಪ್ರವೀಣ್ ಎಂಬುವರ ಜೊತೆ ಆಕೆಯ ಮದುವೆಯಾಗಿತ್ತು. ಮದುವೆಯಾದ ಆರೇಳು ತಿಂಗಳ ಬಳಿಕ ಸಾಕಮ್ಮಳಿಗೆ ವರದಕ್ಷಿಣೆ ತರುವಂತೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲಾಗುತ್ತಿತ್ತು. ಈಗ ಗಂಡನೇ ಇಂತಹ ಕೃತ್ಯ ಎಸಗಿದ್ದಾನೆ ಎಂದು ಮೃತಳ ಪೋಷಕರು ಆರೋಪ ಮಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಾಕಮ್ಮ ಸಾವಿನ ವಿಚಾರ ತಿಳಿಯುತ್ತಿದ್ದಂತೆಯೇ ಪ್ರವೀಣ್ ಮತ್ತು ಮಾವ ರಂಗಸ್ವಾಮಿ ನಾಪತ್ತೆಯಾಗಿದ್ದು, ಸಾಕಮ್ಮನ ಮೃತದೇಹವನ್ನ ಪೋಷಕರು ಗಂಡನ ಮನೆಯ ಮುಂದೆ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂತಹದೊಂದು ಘಟನೆ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.