ಹಾವೇರಿ: ಜಿಲ್ಲೆಯ ಹಿರೇಕೆರೂರಿನಲ್ಲಿ ಬಾಬು ಜಗಜೀವನ್ ರಾಮ್ ಅವರ 113ನೇ ಜನ್ಮದಿನಾಚರಣೆ ಆಚರಿಸಲಾಯಿತು.
![113th Birthday of Babu Jagjivanam Ram at Hirekeroor](https://etvbharatimages.akamaized.net/etvbharat/prod-images/kn-hvr-02-babu-jagajeevanram-7202143_05042020162109_0504f_1586083869_995.jpg)
ಹಿರೇಕೆರೂರು ತಾಲೂಕು ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಗಜೀವನ್ ರಾಮ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ದೇಶದೆಲ್ಲೆಡೆ ಕೊರೊನಾ ವೈರಸ್ ಹಾವಳಿ ಇರುವ ಕಾರಣ ಸರ್ಕಾರ ಕರೆ ನೀಡಿದಂತೆ ಸರಳವಾಗಿ ಜನ್ಮದಿನಾಚರಣೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಜಗಜೀವನ್ ರಾಮ್ ಅವರ ಜೀವನ ಬದುಕು ಎಲ್ಲರಿಗೂ ಆದರ್ಶವಾಗಿದೆ ಎಂದು ತಿಳಿಸಿದರು.