ಹಾವೇರಿ: ಜಿಲ್ಲೆಯಲ್ಲಿ ಇಂದು 116 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2407 ಕ್ಕೆ ಏರಿಕೆಯಾಗಿದೆ.
ರಾಣೆಬೆನ್ನೂರು ತಾಲೂಕಿನಲ್ಲಿ 36, ಹಾವೇರಿ ತಾಲೂಕಿನಲ್ಲಿ 26, ಹಿರೇಕೆರೂರು ತಾಲೂಕಿನಲ್ಲಿ 16, ಶಿಗ್ಗಾಂವ ತಾಲೂಕಿನಲ್ಲಿ 13, ಬ್ಯಾಡಗಿ ತಾಲೂಕಿನಲ್ಲಿ 09, ಹಾನಗಲ್ ತಾಲೂಕಿನಲ್ಲಿ 08, ಸವಣೂರು ತಾಲೂಕಿನಲ್ಲಿ 8 ಜನರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 2407 ಕ್ಕೆ ಏರಿಕೆಯಾಗಿದ್ದು, ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಮೃತರ ಸಂಖ್ಯೆ 50ಕ್ಕೆ ಏರಿಕೆಯಾಗಿದೆ.
ಇಂದು ಸುಮಾರು 34 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. ಇನ್ನೂ 406 ಜನರನ್ನು ಹೋಂ ಐಸೋಲೇಷನ್ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 418 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.