ETV Bharat / state

ಹಾವೇರಿಯಲ್ಲಿ 143 ಮಂದಿಗೆ ವಕ್ಕರಿಸಿದ ಕೊರೊನಾ: ಇಬ್ಬರು ಬಲಿ

author img

By

Published : Jan 22, 2022, 6:36 AM IST

ಕೋವಿಡ್​ 3ನೇ ಅಲೆ ಆರಂಭವಾದ ಮೇಲೆ ಹಾವೇರಿ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನ ಮೂರಂಕಿ ತಲುಪಿದೆ. ನಿನ್ನೆ 143 ಜನರಿಗೆ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಹಾವೇರಿ
ಹಾವೇರಿ

ಹಾವೇರಿ: ಜಿಲ್ಲೆಯಲ್ಲಿ ಶುಕ್ರವಾರ 143 ಜನರಿಗೆ ಕೊರೊನಾ ವೈರಸ್​ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೋವಿಡ್​ ಪೀಡಿತರ ಸಂಖ್ಯೆ 310ಕ್ಕೆ ಏರಿಕೆಯಾಗಿದೆ.

ಕೋವಿಡ್​ 3ನೇ ಅಲೆ ಆರಂಭವಾದ ಮೇಲೆ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಕೊರೊನಾ ಸೋಂಕಿತರ ಸಂಖ್ಯೆ ಒಂದೇ ದಿನ ಮೂರಂಕಿ ತಲುಪಿದೆ. ಹಾವೇರಿ ತಾಲೂಕಿನಲ್ಲಿ- 35, ಹಿರೇಕೆರೂರು ತಾಲೂಕಿನಲ್ಲಿ- 25, ಸವಣೂರು ತಾಲೂಕಿನಲ್ಲಿ- 24 ಜನರಿಗೆ ಸೋಂಕು ತಗುಲಿದೆ.

ಹಾನಗಲ್ ಮತ್ತು ಬ್ಯಾಡಗಿ ತಾಲೂಕಿನಲ್ಲಿ ತಲಾ 14 ಜನರಿಗೆ ಹಾಗೂ ರಾಣೆಬೆನ್ನೂರು ತಾಲೂಕಿನಲ್ಲಿ -19 ಮತ್ತು ಶಿಗ್ಗಾವಿ ತಾಲೂಕಿನಲ್ಲಿ 12 ಜನರಿಗೆ ಕೊರೊನಾ ವಕ್ಕರಿಸಿದೆ.

ಸೋಂಕಿಗೆ ನಿನ್ನೆ ಇಬ್ಬರು ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ದೃಢೀಕರಿಸಿದೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ರಾಘವೇಂದ್ರಸ್ವಾಮಿ, ಹಾವೇರಿ ಜಿಲ್ಲಾಸ್ಪತ್ರೆ ಮತ್ತು ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಓರ್ವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.