ಬೆಂಗಳೂರು: ಅನರ್ಹ ಶಾಸಕ ಬಿ.ಸಿ.ಪಾಟೀಲ್ ಅವರ ಹಿರೇಕೆರೂರು ವಿಧಾನಸಭಾ ಕ್ಷೇತ್ರಕ್ಕೆ 26.5 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅನರ್ಹ ಶಾಸಕರ ದೆಸೆಯಿಂದ ಆಡಳಿತದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅನರ್ಹ ಶಾಸಕರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಲು ಮುಂದಾಗಿದ್ದಅರೆ. ಆರಂಭದಲ್ಲಿ ಬಿ.ಸಿ.ಪಾಟೀಲ್ ಪ್ರತಿನಿಧಿಸಿದ್ದ ಹಿರೇಕೆರೂರು ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲು 26.50 ಕೋಟಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ.
ನಮ್ಮಿಂದ ಅಧಿಕಾರಕ್ಕೆ ಬಂದಿರುವ ಸಿಎಂ ಈಗ ನಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಅನರ್ಹ ಶಾಸಕರ ಆರೋಪದ ಬೆನ್ನಲ್ಲೇ ಅನರ್ಹರ ಕ್ಷೇತ್ರಗಳಿಗೆ ಅನುದಾನ ನೀಡುವ ಮೂಲಕ ಅವರ ಅತೃಪ್ತಿ ಕಡಿಮೆ ಮಾಡುವ ಪ್ರಯತ್ನಕ್ಕೆ ಸಿಎಂ ಮುಂದಾಗಿದ್ದಾರೆ ಎನ್ನಲಾಗಿದೆ.
ಸದ್ಯ ಬಿ.ಸಿ.ಪಾಟೀಲ್ ಕ್ಷೇತ್ರಕ್ಕೆ ಅನುದಾನ ಮಂಜೂರು ಮಾಡಿದ್ದು, ಹಂತ ಹಂತವಾಗಿ ಇತರರ ಕ್ಷೇತ್ರಕ್ಕೂ ಅನುದಾನ ಬಿಡುಗಡೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.