ಹಾವೇರಿ: ಜಿಲ್ಲೆಯಲ್ಲಿ ಇಂದು 31 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 212ಕ್ಕೆ ಏರಿದೆ.
ರಟ್ಟೀಹಳ್ಳಿ ತಾಲೂಕಿನಲ್ಲಿ 16, ಶಿಗ್ಗಾಂವಿಯಲ್ಲಿ ನಾಲ್ವರು, ಸವಣೂರು, ಹಾನಗಲ್ ಮತ್ತು ರಾಣೆಬೆನ್ನೂರು ತಾಲೂಕಿನಲ್ಲಿ ತಲಾ ಮೂವರು, ಹಾವೇರಿ ಮತ್ತು ಬ್ಯಾಡಗಿ ತಾಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.