ಹಾನಗಲ್: ತಾಲೂಕಿನ 319 ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಸದ ಶಿವಕುಮಾರ ಉದಾಸಿ ಸ್ಮಾಟ್೯ಫೋನ್ ವಿತರಿಸಿದ್ರು.
ಪಟ್ಟಣದ ಕುಮಾರೇಶ್ವರ ಸಭಾಭವನದಲ್ಲಿ ಇಂದು ಶಿಶು ಅಭಿವೃದ್ಧಿ ಇಲಾಖೆ ಹಾನಗಲ್ ವತಿಯಿಂದ ನಡೆದ ಪೋಷಣ್ ಅಭಿಯಾನದ ಅಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾಟ್೯ಫೋನ್ ನೀಡಲಾಯಿತು.
ಕೇಂದ್ರ ಮತ್ತು ರಾಜ್ಯ ಸರ್ಕಾರ ಜನಪರವಾಗಿ ಕೆಲಸ ಮಾಡುತ್ತಿವೆ. ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್ ಸಂದರ್ಭದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಿದ್ದೀರಿ ಮತ್ತು ಮಕ್ಕಳ ಯೋಗಕ್ಷೇಮದ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದೀರಿ, ನಿಮ್ಮ ಕಾರ್ಯ ಶ್ಲಾಘನೀಯ ಎಂದು ಬಣ್ಣಿಸಿದರು.