ETV Bharat / state

ಸಿಎಂ ಬೊಮ್ಮಾಯಿ ಸ್ಪರ್ಧಿಸುವ ಶಿಗ್ಗಾಂವಿ ಕ್ಷೇತ್ರದಲ್ಲಿ 36 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ - ಶಿಗ್ಗಾಂವಿ ಕ್ಷೇತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪರ್ಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ 36 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Etv Bharat
Etv Bharat
author img

By

Published : Apr 21, 2023, 9:50 AM IST

ಹಾವೇರಿ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಅದರಲ್ಲೂ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಪ್ರತಿಷ್ಠೆಯ ಕಣವಾಗಿದೆ. ನಾಮಪತ್ರ ಸಲ್ಲಿಕೆಯ ಆರಂಭದ ದಿನನಿಂದ ಕೊನೆಯ ದಿನವಾದ ಗುರುವಾರದವರೆಗೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ 36 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಿನ್ನೆ (ಗುರುವಾರ) ಒಂದೇ ದಿನದಲ್ಲಿ 18 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್, ಜೆಡಿಎಸ್ ಅಭ್ಯರ್ಥಿ ಶಶಿಧರ ಯಲಿಗಾರ, ಎಎಪಿಯ ಮೆಹಬೂಬ್ ಸಾಬ್ ಕಾಲೀಬಾಗ ಸೇರಿದಂತೆ 12 ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ರೈತ ಮಹಿಳೆ ಮಂಜುಳಾ ಪೂಜಾರ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ.

ಇನ್ನು ಗಿರೀಶ್ ಡಿ.ಆರ್ ಪಕ್ಷೇತರ ಅಭ್ಯರ್ಥಿಗೆ ಬಂಜಾರ ಸಮುದಾಯದ ಗುಂಡೂರಿನ ತಿಪ್ಪೇಸ್ವಾಮಿ ಸ್ವಾಮೀಜಿ ಸಾಥ್ ನೀಡಿದರು. ಸ್ವಾಮೀಜಿ ಜೊತೆ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಭ್ಯರ್ಥಿ ಗಿರೀಶ್ ಡಿ.ಆರ್. ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಶುಕ್ರವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಶನಿವಾರ ಮತ್ತು ಭಾನುವಾರ ರಜಾ ದಿನಗಳಾಗಿದ್ದು 24 ರಂದು ನಾಮಪತ್ರಗಳ ವಾಪಸಾತಿಗೆ ಕೊನೆಯ ದಿನವಾಗಿದೆ. ಏ.24 ರ ನಂತರ ಸ್ಪರ್ಧಾ ಕಣದ ಸ್ಪಷ್ಟ ಚಿತ್ರಣ ಸಿಗಲಿದೆ.

ಇದನ್ನೂ ಓದಿ: ಮಧ್ಯರಾತ್ರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​: ಶಿಡ್ಲಘಟ್ಟ ಹಾಲಿ ಶಾಸಕರಿಗೆ ಕೊಕ್

ಕೊನೆಯ ದಿನ ನಾಮಪತ್ರ ಜಾತ್ರೆ: ಏ.13ರಿಂದ ಆರಂಭವಾಗಿದ್ದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಗುರುವಾರ ಮುಕ್ತವಾಗಿದೆ. ಏಪ್ರಿಲ್​ 20ರಂದು ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿತ್ತು. ಶುಕ್ರವಾರ ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.24ರ ವರೆಗೆ ನಾಮಪತ್ರ ವಾಪಾಸು ಪಡೆಯಲು ಅವಕಾಶ ಇದೆ. ಈವರೆಗೆ ನಾಮಪತ್ರ ಸಲ್ಲಿಕೆಯಲ್ಲಿ ಬ್ಯುಸಿಯಾಗಿದ್ದ ಅಭ್ಯರ್ಥಿಗಳು ಶುಕ್ರವಾರದಿಂದ ಪೂರ್ಣ ಪ್ರಮಾಣದಲ್ಲಿ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ಕಾರ್ಯ ಆರಂಭಿಸಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಗ್ರಾ. ಜಿಲ್ಲೆಯ 4 ಕ್ಷೇತ್ರಗಳಲ್ಲಿ 33 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಒಟ್ಟು 5,102 ನಾಮಪತ್ರ ಸಲ್ಲಿಕೆ: ಏ.13ರಿಂದ ಗುರುವಾರದವರೆಗೆ ಒಟ್ಟು 3,632 ಅಭ್ಯರ್ಥಿಗಳು 5,102 ನಾಮಪತ್ರ ಸಲ್ಲಿಸಿದ್ದಾರೆ. ಈ ಪೈಕಿ 3,327 ಪುರುಷ ಅಭ್ಯರ್ಥಿಗಳಿಂದ 4,710 ನಾಮಪತ್ರ ಸಲ್ಲಿಕೆಯಾಗಿದ್ದರೆ, 304 ಮಹಿಳಾ ಅಭ್ಯರ್ಥಿಗಳಿಂದ 391 ನಾಮಪತ್ರ ಸಲ್ಲಿಕೆಯಾಗಿವೆ. ಇತರೆಯಿಂದ ಒಂದು ನಾಮಪತ್ರ ಸಲ್ಲಿಸಲಾಗಿದೆ.

ಯಾವ ಪಕ್ಷದಿಂದ ಎಷ್ಟು ನಾಮಪತ್ರ?: ಇದರಲ್ಲಿ ಬಿಜೆಪಿ 707, ಕಾಂಗ್ರೆಸ್ 651, ಜೆಡಿಎಸ್ 455, ಎಎಪಿ 373, ಬಿಎಸ್​ಪಿ 179, ಸಿಪಿಐಎಂ 5, ಎನ್​ಪಿಪಿ ಅಭ್ಯರ್ಥಿಗಳಿಂದ 5 ನಾಮಪತ್ರ ಸಲ್ಲಿಯಾಗಿವೆ. ನೋಂದಾಯಿತ ಗುರುತಿಸದ ಪಕ್ಷಗಳ ಅಭ್ಯರ್ಥಿಗಳಿಂದ 1007 ಹಾಗೂ ಪಕ್ಷೇತರ ಅಭ್ಯರ್ಥಿಗಳಿಂದ ಒಟ್ಟು 1,720 ನಾಮಪತ್ರಗಳು ಸಲ್ಲಿಕೆಯಾಗಿವೆ.

ಇದನ್ನೂ ಓದಿ: ಕೊನೆಯ ದಿನ ನಾಮಪತ್ರ ಜಾತ್ರೆ: ಗುರುವಾರ 1934 ಸೇರಿ ಒಟ್ಟು 5102 ಉಮೇದುವಾರಿಕೆ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.